ದೇವನಹಳ್ಳಿ : ಸಚಿವ ಅಶ್ವತ್ಥ್ ನಾರಾಯಣ್ ಅವರ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಕ್ಕೆ ಭೂಮಿ ಸ್ವಾಧೀನ ಮಾಡಿರುವುದನ್ನ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ದೇವನಹಳ್ಳಿಯ ಸರ್ಕಾರಿ ಕಾಲೇಜಿನ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಿಸುತ್ತಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸಂಕೀರ್ಣ ಉದ್ಘಾಟನೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಚಿವ ಎಂಟಿಬಿ ನಾಗರಾಜ್ ಸಹ ಭಾಗಿಯಾಗಿದ್ದರು.
ಇದನ್ನೂ ಓದಿ: ಗ್ರಾಹಕರ ಜೇಬಿಗೆ ಕತ್ತರಿ: ಅಮೂಲ್ ಹಾಲಿನ ದರದಲ್ಲಿ ಲೀಟರ್ಗೆ 2 ರೂ. ಏರಿಕೆ
ಈ ವೇಳೆ ಚನ್ನರಾಯಪಟ್ಟಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳ ರೈತರ ಜಮೀನನ್ನು ಸರ್ಕಾರ ಸ್ವಾಧೀನ ಪಡಿಸಿಕೊಂಡಿದೆ. ಅದು ಕೃಷಿ ಭೂಮಿಯಾಗಿದ್ದು, ನಾವು ಎಷ್ಟೇ ಮನವಿ ಮಾಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಕಾರ್ಯಕ್ರಮದ ಮಧ್ಯೆ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದ್ರು.