ಬೆಂಗಳೂರು : ದೆಹಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲಿಯೂ ರೈತರು ಧರಣಿ ನಡೆಸುವುದಕ್ಕೆ ಮುಂದಾಗಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ಮೂರು ಹೊಸ ಕೃಷಿ ಮಸೂದೆಗಳನ್ನ ಖಂಡಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಹೋರಾಟ 20ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ.
ರೈತರ ಸಮಸ್ಯೆಗಳನ್ನ ಬಗೆಹರಿಬೇಕಾದ ಸರ್ಕಾರ ವಿಳಂಬ ಅನುಸರಿಸುತ್ತಿರುವ ಕಾರಣದಿಂದ ದೇಶದ ರೈತರ ಕಿಚ್ಚು ಹೆಚ್ಚಾಗಿದೆ. ದೆಹಲಿ ರೈತ ಹೋರಾಟವನ್ನ ಬೆಂಬಲಿಸಿ ರಾಜ್ಯದಲ್ಲಿಯೂ ರೈತರು ಧರಣಿ ನಡೆಸುವುದಕ್ಕೆ ಮುಂದಾಗಿದ್ದಾರೆ ಎಂದರು.
ಓದಿ: ಸುಗ್ರೀವಾಜ್ಞೆ ವಾಪಸ್ ಪಡೆದ್ರೆ ಮಾತ್ರ ಪ್ರತಿಭಟನೆ ಕೈಬಿಡ್ತೇವೆ: ಕುರುಬೂರು ಶಾಂತಕುಮಾರ್
ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ನಾಳೆಯಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬರಲಿದ್ದಾರೆ. ಸರ್ಕಾರ ಇನ್ನಷ್ಟು ವಿಳಂಬ ಮಾಡಿದ್ರೆ ರಾಜ್ಯ ವ್ಯಾಪ್ತಿ ವಿಸ್ತರಣೆ ಮಾಡಲಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.