ETV Bharat / state

ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಭಯ ಬಿದ್ದು ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿ ಕೆ ಶಿವಕುಮಾರ್ - ಬಿಜೆಪಿ ರಾವಣನ ಹೆಸರು ತಂದಿದೆ

''ಬಿಜೆಪಿಯವರು ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಮೈತ್ರಿಗೆ ಹೆದರಿಕೊಂಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಅವರಿಗೆ ರಾವಣನ ರೀತಿ 10 ತಲೆ ಹಾಕಿದ್ದಾರೆ. ಬಿಜೆಪಿಯವರು ಪುರಾಣ ತಿಳಿದುಕೊಳ್ಳಬೇಕು. ರಾಹುಲ್‌ ಗಾಂಧಿ ಬಗ್ಗೆ ಎಷ್ಟು ಭಯಭೀತರಾಗಿದ್ದಾರೆ ಎನ್ನುವುದು 'ರಾವಣ' ಪೋಸ್ಟರ್ ನೋಡಿದರೆ ತಿಳಿಯುತ್ತದೆ'' ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕಿಡಿಕಾರಿದರು.

D K Shivakumar
ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಭಯ ಬಿದ್ದು ಬಿಜೆಪಿ ರಾವಣನ ಹೆಸರು ತಂದಿದೆ: ಡಿ.ಕೆ. ಶಿವಕುಮಾರ್
author img

By ETV Bharat Karnataka Team

Published : Oct 7, 2023, 2:45 PM IST

ಬೆಂಗಳೂರು: ''ರಾಹುಲ್ ಗಾಂಧಿ ಅವರ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಅವರನ್ನು, ರಾವಣನಂತೆ ಬಿಜೆಪಿಯವರು ಬಿಂಬಿಸಿದ್ದಾರೆ. ಬಿಜೆಪಿಗೆ ರಾಮ- ರಾವಣ ನಡುವಿನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ. ಅದಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದ ಬಳಿ ಇಂದು (ಶನಿವಾರ) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್‌ ಗಾಂಧಿ ಅವರನ್ನು ರಾವಣನನ್ನಾಗಿ ಬಿಂಬಿಸಿ ತಿರುಚಿರುವ ಬಿಜೆಪಿ ಪೋಸ್ಟರ್ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, "ಉತ್ತರ ಭಾರತದಲ್ಲಿ ರಾವಣನನ್ನು ಕೂಡ ಪೂಜಿಸುವ ಪದ್ಧತಿ ಇದೆ. ನಮ್ಮ ಸಂಸ್ಕೃತಿಯನ್ನು ಸರಿಯಾಗಿ ತಿಳಿದುಕೊಂಡಿದ್ದರೆ, ಈ ಮಟ್ಟಕ್ಕೆ ಬಿಜೆಪಿಯವರು ಇಳಿಯುತ್ತಿರಲಿಲ್ಲ. ಭಾರತ್ ಜೋಡೋ ಯಾತ್ರೆಯ ನಂತರ ಇಂಡಿಯಾ ಮೈತ್ರಿಕೂಟ ಪ್ರಾರಂಭವಾಯಿತು'' ಎಂದು ತಿಳಿಸಿದರು.

''ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗಿ ರೂಪುಗೊಳ್ಳುತ್ತಿದೆ. ಇಂಡಿಯಾ ಒಂದಾಗುತ್ತಿದೆ. ಇಂಡಿಯಾ ರಕ್ಷಣೆಯಾಗಲಿದೆ. ಹೀಗಾಗಿ ಬಿಜೆಪಿಯವರು ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಮೈತ್ರಿಗೆ ಹೆದರಿಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರಿಗೆ ರಾವಣನ ರೀತಿ 10 ತಲೆ ಹಾಕಿದ್ದಾರೆ. ಬಿಜೆಪಿಯವರು ಪುರಾಣ ತಿಳಿದುಕೊಳ್ಳಬೇಕು. ರಾಹುಲ್‌ ಗಾಂಧಿ ಅವರ ಬಗ್ಗೆ ಎಷ್ಟು ಭಯಭೀತರಾಗಿದ್ದಾರೆ ಎನ್ನುವುದು 'ರಾವಣ' ಪೋಸ್ಟರ್ ನೋಡಿದರೆ ತಿಳಿಯುತ್ತದೆ” ಎಂದ ಅವರು, ''ಬಿಜೆಪಿಯ ಈ ನಡೆ ವಿರುದ್ಧ ಇಡೀ ದೇಶದಾದ್ಯಂತ ಜನರು ಬೀದಿಗಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಲ್ಲಿಯೂ ಸಚಿವರಾದ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ'' ಎಂದರು.

ಬಾರ್ ಲೈಸೆನ್ಸ್ ವಿಚಾರ: ನೂತನ ಮದ್ಯದಂಗಡಿಗಳಿಗೆ ಅನುಮತಿ ನೀಡುವುದಿಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ, ''ಮುಖ್ಯಮಂತ್ರಿಗಳು ಹೇಳಿದ್ದಾರೆ. ಮದ್ಯದಂಗಡಿ ತೆರೆಯಲು ಅದಕ್ಕೆ ಆದ ಕಾನೂನು ಎಂಎಸ್ಐಎಲ್ ಸೇರಿದಂತೆ ಅನೇಕ ನಿಯಮಗಳಿವೆ. ಹೀಗಾಗಿ ಪ್ರತಿ ಹಳ್ಳಿ ಹಳ್ಳಿಯಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಇವುಗಳನ್ನು ಒಂದು ವ್ಯವಸ್ಥಿತ ರೂಪದಲ್ಲಿ ತರಬೇಕಿದೆ'' ಎಂದು ಡಿಕೆಶಿ ತಿಳಿಸಿದರು.

ರಾಜರಾಜೇಶ್ವರಿ ನಗರದ ಒಂಬತ್ತು ವಾರ್ಡ್‌ಗಳಿಗೆ ಸಂಬಂಧಿಸಿದ ಕಾಮಗಾರಿಗಳ ಬಿಲ್ ಮೊತ್ತ ಬಿಡುಗಡೆಯಾಗಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಬಿಡುಗಡೆ ಆಗುತ್ತದೆ, ಅಲ್ಲಿನ ಶಾಸಕರೇ ಕಾಮಗಾರಿಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿ ತನಿಖೆ ಮಾಡಿ ಎಂದು ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಗೌರವದಿಂದ ಸ್ವೀಕರಿಸುತ್ತೇವೆ. ನೀವು (ಮಾಧ್ಯಮದವರು) ಸಹ ಅವರ ಬಗ್ಗೆ ಹೆಚ್ಚು ಮಾತನಾಡುತ್ತಿರಿ'' ಎಂದು ಉತ್ತರಿಸಿದರು.

ತೆರಿಗೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ''ನಾಗರಿಕರು ತಮ್ಮ ಆಸ್ತಿಗೆ ಅನುಗುಣವಾಗಿ ತೆರಿಗೆಯನ್ನು ಸರಿಯಾಗಿ ಕಟ್ಟಿದರೆ ಸಾಕು. ಸದ್ಯಕ್ಕೆ ಸರ್ಕಾರ ಯಾವುದೇ ಹೊಸ ತೆರಿಗೆ ಹಾಕುವ ಬಗ್ಗೆ ಆಲೋಚನೆ ಮಾಡಿಲ್ಲ'' ಎಂದು ಅವರು ಹೇಳಿದರು.

ಲಿಂಗಾಯತರ ಶೇ.20 ರಷ್ಟು ಹಾಗೂ ಇತರೆಯವರ ಶೇ.80 ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ ಎಂಬ ಪ್ರಕಾಶ್ ರಾಥೋಡ್ ಹೇಳಿಕೆಗೆ ಪ್ರತಿಕ್ರಿಯಿಸಿ, "ಅಂತಹ ಯಾವುದೇ ಲೆಕ್ಕ ಇಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಗೌಪ್ಯ ಮತದಾನ ವ್ಯವಸ್ಥೆ ಅಳವಡಿಸಿಕೊಂಡಿದ್ದೇವೆ. ಯಾರೆಲ್ಲ ಮತ ಹಾಕುತ್ತಾರೆ ಎಂದು ಹೇಗೆ ತಿಳಿಯುತ್ತದೆ? ಇಡೀ ರಾಜ್ಯದ ಜನ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ, 136 ಸೀಟು ಕೊಟ್ಟಿದ್ದಾರೆ'' ಎಂದು ತಿಳಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಅಧಿಕೃತ ಎಕ್ಸ್​​ ಖಾತೆ ಸ್ಥಗಿತಗೊಳಿಸಲು ಕೆಪಿಸಿಸಿ ದೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.