ETV Bharat / state

ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯ ಕಾರ್ಯಸಾಧ್ಯತಾ ವರದಿ ಸರ್ಕಾರಕ್ಕೆ ಸಲ್ಲಿಕೆ: ಸಚಿವ ಎನ್ ಎಸ್ ಬೋಸರಾಜು

ರಾಯಚೂರಿನ ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯ ಕಾರ್ಯ ಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಸಚಿವ ಎನ್​ ಎಸ್​​ ಬೋಸರಾಜು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

feasibility-report-for-bolamandoddy-irrigation-project-says-minister-ns-bhosaraju
ಸಚಿವ ಎನ್ ಎಸ್ ಭೋಸರಾಜು
author img

By ETV Bharat Karnataka Team

Published : Jan 10, 2024, 10:05 AM IST

ಬೆಂಗಳೂರು : ರಾಯಚೂರು ತಾಲ್ಲೂಕಿನ ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದರು. ವಿಕಾಸಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.

ಈ ಯೋಜನೆಯಿಂದ ಸುಮಾರು 6,464 ಹೆಕ್ಟೇರ್​ಗೆ ನೀರಾವರಿ ಹಾಗೂ ಕೆರೆಗಳನ್ನು ತುಂಬಿಸಬಹುದಾಗಿದೆ. ಕೃಷ್ಣಾ ನದಿಯ ನೀರನ್ನು ಬಳಸಿಕೊಳ್ಳುವ ಮೂಲಕ ರೈತರ ಬೆಳೆಗೆ ಹಾಗೂ ಜನರಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬಹುದಾಗಿದೆ. ಈ ಬಗ್ಗೆ ತಾಂತ್ರಿಕ ಕಾರ್ಯಸಾಧ್ಯತಾ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು. ಇದೇ ವೇಳೆ ಮಸ್ಕಿ ವಿಧಾನಸಭಾ ಕ್ಷೇತ್ರದ 5ಎ ಕಾಲುವೆಯ ಪ್ರಸ್ತಾವನೆಯ ಕುರಿತು ಚರ್ಚಿಸಲಾಯಿತು.

ತಿಂಗಳಾಂತ್ಯಕ್ಕೆ ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು : ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು.

ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಇದನ್ನು ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನು ಶೀಘ್ರವಾಗಿ ಸಿದ್ಧಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನು ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನು ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ - ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನ ಏನಿದೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.