ETV Bharat / state

ಪೌರ ಕಾರ್ಮಿಕರ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ ಬಿಬಿಎಂಪಿ ಕಾರ್ಪೋರೇಟರ್​ - ಶಾಕಂಬರಿ ನಗರದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ

ವಾರ್ಡ್ ವ್ಯಾಪ್ತಿಯ ಜಯನಗರ ಪ್ರದೇಶವನ್ನು ಸ್ವಚ್ಚಗೊಳಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಶಾಕಾಂಬರಿ ನಗರ ಪಾಲಿಕೆ ಸದ್ಯಸ್ಯೆ ಪೌರ ಕಾರ್ಮಿಕರ ಪಾದ ಪೂಜೆ ಮಾಡಿ ,ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

Felicitation for Civil Labors by BBMP Corporator
ಪೌರ ಕಾರ್ಮಿಕರಿಗೆ ಗೌರವಾರ್ಪಣೆ
author img

By

Published : May 17, 2020, 2:40 PM IST

ಬೆಂಗಳೂರು : ವಾರ್ಡ್ ಸಂಖ್ಯೆ 179 ಶಾಕಾಂಬರಿ ನಗರದಲ್ಲಿ ಕೆಲಸ ನಿರ್ವಹಿಸುವ ಸುಮಾರು 150 ಪೌರ ಕಾರ್ಮಿಕರಿಗೆ ಪಾಲಿಕೆ ಸದಸ್ಯೆ ಮಾಲತಿ ಸೋಮಶೇಖರ್ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು.

ವಾರ್ಡ್ ಸಂಖ್ಯೆ 179 ರೆಡ್ ಝೋನ್ ಆಗಿದ್ದಾಗಲೂ ಪೌರ ಕಾರ್ಮಿಕರು ಪ್ರತಿನಿತ್ಯ ಸ್ವಚ್ಚತಾ ಕಾರ್ಯದಲ್ಲಿ ತೊಡಗುತ್ತಿದ್ದರು. ವಾರ್ಡ್ ವ್ಯಾಪ್ತಿಯ ಜಯನಗರ ಪ್ರದೇಶವನ್ನು ಸ್ವಚ್ಚಗೊಳಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಶಾಕಾಂಬರಿ ನಗರ ಪಾಲಿಕೆ ಸದ್ಯಸ್ಯೆ ಪೌರ ಕಾರ್ಮಿಕರ ಪಾದ ಪೂಜೆ ಮಾಡಿ ,ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ವೇಳೆ ಕೆಲ ಹಿರಿಯ ಪೌರಕಾರ್ಮಿಕರು ಭಾವುಕರಾದರು.

ಪೌರ ಕಾರ್ಮಿಕರಿಗೆ ಗೌರವಾರ್ಪಣೆ

ಇದೇ ವೇಳೆ ಪೌರ ಕಾರ್ಮಿಕರಿಗೆ ಆರ್​ವಿ ಕಾಲೇಜು ಆಡಳಿತ ಮಂಡಳಿ ತಲಾ 5 ಸಾವಿರ ರೂ. ನೀಡಿ ಗೌರವಿಸಿತು. ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೊರೇಟರ್​ಗಳಾದ ಎನ್​ಆರ್ ರಮೇಶ್, ಸೋಮಶೇಖರ್, ಹಾಗೂ ಅರ್​ವಿ‌ ಕಾಲೇಜು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.