ETV Bharat / state

ಮೂರು ತಿಂಗಳ ಅವಧಿಯಲ್ಲಿ 242 ಭ್ರೂಣ ಹತ್ಯೆ : ಪೊಲೀಸ್ ತನಿಖೆಯಲ್ಲಿ ಆತಂಕಕಾರಿ ಮಾಹಿತಿ ಬಯಲು - ಪೊಲೀಸ್ ತನಿಖೆ

Female fetus detection & abortion case: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ತನಿಖೆಯ ವೇಳೆ ಭಯಾನಕ ವಿಚಾರಗಳು ಬಂಧಿತರಿಂದ ಹೊರಬರುತ್ತಿವೆ.

Commissioner of Police B. Dayanand
ಪೊಲೀಸ್ ಆಯುಕ್ತ ಬಿ.ದಯಾನಂದ್
author img

By ETV Bharat Karnataka Team

Published : Nov 28, 2023, 1:19 PM IST

Updated : Nov 28, 2023, 2:39 PM IST

ಬೆಂಗಳೂರು ನಗರ‌ ಪೊಲೀಸ್ ಆಯುಕ್ತ ಬಿ. ದಯಾನಂದರಿಂದ ಮಾಹಿತಿ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಆರೋಪಿಗಳು ಒಂದೂವರೆ ಸಾವಿರಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳ ಪೈಕಿ ಭ್ರೂಣ ಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು ತಂಡ ಕೆಲಸ ಮಾಡಿದ್ದು, ಆರೋಪಿಗಳ ಕರೆ ವಿವರಗಳನ್ನು ಕಲೆಹಾಕಿದಾಗ ವೈದ್ಯರು ಸೇರಿದಂತೆ ಅನೇಕರ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ.

ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದವರನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಅನೇಕರು ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂಬುದು ತಿಳಿದು ಬಂದಿದೆ. ಆರೋಪಿಗಳು ವ್ಯವಸ್ಥಿತವಾಗಿ ಜಾಲ ರೂಪಿಸಿಕೊಂಡು ದುಷ್ಕೃತ್ಯ ಎಸಗುತ್ತಿದ್ದು, ಪ್ರಕರಣದಲ್ಲಿ ಇಲ್ಲಿಯವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಮೂಲತಃ ಮೈಸೂರು ಹಾಗೂ ಮಂಡ್ಯದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯದ ಆಲೆಮನೆ, ಮೈಸೂರು ಹಾಗೂ ಬೆಂಗಳೂರಿನ‌ ಬೈಯಪ್ಪನಹಳ್ಳಿಯ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದರು. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆ ತರಲಾಗುತ್ತಿತ್ತು. ಒಂದು ಭ್ರೂಣ ಹತ್ಯೆಗೆ 20 ಸಾವಿರ ರೂಪಾಯಿನಂತೆ ಪಡೆದು ಕೃತ್ಯ ಎಸಗುತ್ತಿದ್ದರು. ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಭ್ರೂಣ ಹತ್ಯೆ ಮಾಡಿದ್ದಾರೆ ಹಾಗೂ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆಸಿರುವುದು ತಿಳಿದು ಬಂದಿದೆ ಎಂದು‌‌ ಬೆಂಗಳೂರು ನಗರ‌ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

ಹೆಣ್ಣು ಭ್ರೂಣ ಪತ್ತೆ, ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಜಾಲದ ಕುರಿತು ಮಾಹಿತಿ ಪಡೆದಿದ್ದ ಬೈಯಪ್ಪನಹಳ್ಳಿ ಪೊಲೀಸರು ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, ನವೀನ್ ಕುಮಾರ್ ಮತ್ತು ನಯನ್ ಕುಮಾರ್ ಎಂಬುರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು ಗರ್ಭಿಣಿಯರನ್ನು ಗುರುತಿಸಿಕೊಂಡು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದರು. ಬಳಿಕ ಹೆಣ್ಣು ಭ್ರೂಣವಾದರೆ ಗರ್ಭಪಾತ ಮಾಡಿಸುತ್ತಿದ್ದರು ಅನ್ನೋದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿತ್ತು.

ಮತ್ತಷ್ಟು ತನಿಖೆ ಮುಂದುವರೆಸಿ ಚೆನ್ನೈ ಮೂಲದ ವೈದ್ಯ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯ ಡಾ. ಚಂದನ್ ಬಲ್ಲಾಳ್, ಆತನ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಶನಿಸ್ಟ್ ರಿಜ್ಮಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್ ಎಂಬಾತನನ್ನು ಬಂಧಿಸಲಾಗಿತ್ತು. ಇನ್ನು, ಈ ಪ್ರಕರಣದಲ್ಲಿ ಮೊನ್ನೆಯೇ ಮೈಸೂರಿನ ಉದಯಗಿರಿಯ ಖಾಸಗಿ ಆಸ್ಪತ್ರೆ, ರಾಜ್​ ಕುಮಾರ್ ರಸ್ತೆಯ ಆಯುರ್ವೇದಿಕ್ ಡೇ ಕೇರ್ ಸೆಂಟರನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ: ತಿಂಗಳಿಗೆ 20 ರಿಂದ 25 ಹೆಣ್ಣು ಭ್ರೂಣ ಹತ್ಯೆ: ವೈದ್ಯ ಸೇರಿ ಮತ್ತೆ ಐವರ ಬಂಧನ

Last Updated : Nov 28, 2023, 2:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.