ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ, ಬೆಂಗಳೂರಿನ 31 ಕಡೆಗಳಲ್ಲಿ ಫೀವರ್ ಕ್ಲಿನಿಕ್ ನಿರ್ಮಾಣ ಮಾಡಲಾಗಿದೆ. ಇಂದಿನಿಂದ ಶುರುವಾಗಿರುವ ಕ್ಲಿನಿಕ್ಗೆ ಜನರು ಆಗಮಿಸಿ, ಕೊರೊನಾ ಬಗೆಗಿನ ಅನುಮಾನಗಳನ್ನು ಪರಿಹರಿಸಿಕೊಳ್ಳುತ್ತಿದ್ದಾರೆ. ಬೆಳಗ್ಗೆ 9ರಿಂದ ಸಂಜೆ 4:30ರವೆಗೂ ಕ್ಲಿನಿಕ್ಗಳು ಕಾರ್ಯ ನಿರ್ವಹಿಸುತ್ತವೆ.
ಈ ಕ್ಲಿನಿಕ್ಗಳಲ್ಲಿ ಜ್ವರ, ಕಫ ಹಾಗೂ ಸ್ಕ್ರೀನಿಂಗ್ ಟೆಸ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೊಂದು ಕ್ಲಿನಿಕ್‌ನಲ್ಲೂ ವೈದ್ಯಾಧಿಕಾರಿ, ಶುಶ್ರೂಶಕಿ, ಹಿರಿಯ ಹಾಗೂ ಕಿರಿಯ ಆರೋಗ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಬಿಬಿಎಂಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಈ ಕ್ಲಿನಿಕ್ಗಳನ್ನು ತೆರೆಯಲಾಗಿದೆ. ಸರ್ಕಾರಿ ರಜೆ ದಿನಗಳಲ್ಲೂ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ಇವುಗಳು ದಿನದ ವರದಿಯನ್ನು ಸಂಗ್ರಹಿಸಿ ಪಾಲಿಕೆಗೆ ಸಲ್ಲಿಸುವಂತೆ ಆದೇಶಿಸಲಾಗಿದೆ.