ETV Bharat / state

ಸಿಎಂ ಗಾದಿಗೆ ಸಿದ್ದು-ಡಿಕೆಶಿ ನಡುವೆ ಫೈಟ್: ಹೈಕಮಾಂಡ್‌ನಿಂದ ಸಂಧಾನ ಸೂತ್ರ?

ಕರ್ನಾಟಕ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ಕಾಂಗ್ರೆಸ್​​ ಪಕ್ಷ ಸ್ಪಷ್ಟಬಹುಮತ ಪಡೆದು ವಿಜಯಶಾಲಿಯಾಗಿದೆ. ಆದರೆ, ಮುಂದಿನ ಸಿಎಂ ಅಭ್ಯರ್ಥಿ ಆಯ್ಕೆ ಹೈಕಮಾಂಡ್​ಗೆ ಸವಾಲಾಗಿದೆ.

ಸಿಎಂ ಗಾದಿಗೆ  ಸಿದ್ದು - ಡಿಕೆಶಿ ನಡುವೆ ಫೈಟ್
ಸಿಎಂ ಗಾದಿಗೆ ಸಿದ್ದು - ಡಿಕೆಶಿ ನಡುವೆ ಫೈಟ್
author img

By

Published : May 15, 2023, 10:48 AM IST

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಗಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಸರ್ವಾನುಮತದಿಂದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದು ಕಗ್ಗಂಟಾಗಿ ಪರಿಣಮಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರುಗಳು ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಆಗಲು ಪಟ್ಟು ಹಿಡಿದಿದ್ದಾರೆ. ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಜಟಿಲವಾಗಿದೆ.

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಶಾಸಕರ ಅಭಿಪ್ರಾಯ ಆಧರಿಸಿ ಆಯ್ಕೆ ಮಾಡಬೇಕು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವೋಟಿಂಗ್ ಮೂಲಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸಬೇಕು. ಹೆಚ್ಚಿನ ಶಾಸಕರ ಮತ ಪಡೆದವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಪಷ್ಟ ನಿಲುವನ್ನು ಹೈಕಮಾಂಡ್ ಪ್ರತಿನಿಧಿಗಳಾಗಿ ಆಗಮಿಸಿದ ವೀಕ್ಷಕರ ಬಳಿ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಾಸಕರ ವೋಟಿಂಗ್ ಮೂಲಕ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದಕ್ಕೆ ಒಲವು ಹೊಂದಿಲ್ಲವೆಂದು ಹೇಳಲಾಗಿದೆ. ಸಿಎಂ ಆಯ್ಕೆ ಅಧಿಕಾರವನ್ನು ಕಾಂಗ್ರೆಸ್ ಹೈಕಮಾಂಡ್​ಗೆ ನೀಡಬೇಕೆನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕೆನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪಕ್ಷದ ಇಬ್ಬರು ಹಿರಿಯ ಮುಖಂಡರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ತಮ್ಮ ವಿಭಿನ್ನ ನಿಲುವು ವ್ಯಕ್ತಪಡಿಸಿದ್ದರಿಂದ ಸರ್ವಾನುಮತದಿಂದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ಹೈಕಮಾಂಡ್​ಗೆ ಒಂದು ರೀತಿಯಲ್ಲಿ ಸವಾಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಲು ಹಾಗೂ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರನ್ನಾಗಿ ಪಕ್ಷದ ಹಿರಿಯ ಮುಖಂಡ ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಮೂವರ ತಂಡವನ್ನು ಅವರನ್ನು ಕರ್ನಾಟಕಕ್ಕೆ ಕಳಿಸಿದ್ದು ಅವರು ತಮ್ಮ ವರದಿ ನೀಡಲಿದ್ದಾರೆ.

ಭಾನುವಾರ ಸಂಜೆ ಖಾಸಗಿ ಹೋಟೆಲ್​ನಲ್ಲಿ ನಡೆದ ಕಾಂಗ್ರೆಸ್‌ನ ನೂತನ ಶಾಸಕರ ಸಭೆಯಲ್ಲಿ ಶಾಸಕಾಂಗ ಪಕ್ಷ ನಾಯಕನ ಆಯ್ಕೆ ಮಾಡುವ ಕುರಿತು ಪ್ರಾಥಮಿಕ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರಿಗೆ ನೀಡಲು ಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಿ ಹಾಗು ಪ್ರಮುಖ ಮುಖಂಡರ ಅಭಿಪ್ರಾಯ ಪಡೆದು ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಸರಕಾರದ 5 ವರ್ಷಗಳ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೊದಲ ಎರಡರಿಂದ ಎರಡೂವರೆ ವರ್ಷ ನಂತರ ಉಳಿದ ಎರಡೂವರೆ ಅಥವಾ ಮೂರು ವರ್ಷದ ಅವಧಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಅಧಿಕಾರ ಹಂಚಿಕೆ ಮಾಡುವ ಬಗ್ಗೆ ಹೈಕಮಾಂಡ್ ಸಂಧಾನ ಸೂತ್ರ ಸಿದ್ಧಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೈಕಮಾಂಡ್ ಮುಖ್ಯಮಂತ್ರಿ ಆಡಳಿತ ಅವಧಿಯ ಹಂಚಿಕೆ ನಿರ್ದಾರ ತಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಶಾಸಕರ ಅಭಿಪ್ರಾಯ ಸಂಗ್ರಹದ ಆಧಾರದ ಬದಲಿಗೆ ಹೈಕಮಾಂಡ್ ತೀರ್ಮಾನದಂತೆ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವ ಪ್ರಕ್ರಿಗೆ ಸಹಮತ ವ್ಯಕ್ತಪಡಿಸಿದ್ದಾರೆಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಆಯ್ಕೆ ಅಧಿಕಾರವನ್ನು ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡುವ ಶಾಸಕಾಂಗ ಪಕ್ಷದ ಒಂದು ಸವಾಲಿನ ನಿರ್ಣಯವನ್ನು ಸಭೆಯಲ್ಲಿ ಸಿದ್ದರಾಮಯ್ಯ ಮಂಡಿಸಿದರು. ಈ ನಿರ್ಣಯಕ್ಕೆ ಸಿಎಂ ಆಕಾಂಕ್ಷಿಯಾಗಿರುವ ಡಿ ಕೆ ಶಿವಕುಮಾರ್ ಹಾಗು ಇತರ ಶಾಸಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.