ETV Bharat / state

ನಮ್ಮ ಮೆಟ್ರೋದಲ್ಲಿ ಪ್ರಾಂಕ್; ಯುವಕನ ವಿರುದ್ಧ ಪ್ರಕರಣ

ಬೆಂಗಳೂರು ಮೆಟ್ರೋದಲ್ಲಿ ಪ್ರಾಂಕ್ ಮಾಡಿದ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

file-a-case-against-the-young-man-who-pranked-in-bengaluru-metro
ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಿದ ಯುವಕನ ವಿರುದ್ಧ ಪ್ರಕರಣ ದಾಖಲು
author img

By ETV Bharat Karnataka Team

Published : Oct 6, 2023, 10:43 PM IST

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪ್ರಾಂಕ್ ಮಾಡಿದ ಯುವಕನ ವಿರುದ್ಧ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ಯುವಕ ರೈಲಿನಲ್ಲಿ ಪ್ರಯಾಣಿಸುವಾಗ ಮೂರ್ಛೆ ಬಂದವನಂತೆ ವರ್ತಿಸಿದ್ದ. ಇದರಿಂದ ಸಹ ಪ್ರಯಾಣಿಕರು ಕೆಲಕಾಲ ಭಯಭೀತರಾಗಿದ್ದರು. ಇದರ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ವೈರಲ್​ ಆಗಿತ್ತು.

ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ಮೂವರು ಪ್ರಯಾಣಿಕರ ಪೈಕಿ ಪ್ರಾಂಕ್ ಪ್ರಜ್ಜು ಎಂಬಾತ ಬೋಗಿಯಲ್ಲಿ ನಿಂತಿದ್ದಾಗ ಮೂರ್ಛೆ ಬಂದವನಂತೆ ವರ್ತಿಸಿದ್ದ. ಈ ದೃಶ್ಯವನ್ನು ಮೊಬೈಲ್ ಮುಖಾಂತರ ಆತನ ಸ್ನೇಹಿತರ ಸಹಾಯದಿಂದ ವಿಡಿಯೋ ಮಾಡಿಸಿದ್ದ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡಿದ್ದ. ಸದ್ಯ ಯುವಕನನ್ನು ಠಾಣೆಗೆ ಕರೆಯಿಸಿ ಸೂಕ್ತ ತಿಳುವಳಿಕೆ ನೀಡಿ, ಇನ್ನೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವ್ಯಕ್ತಿಯು ಮತ್ತೊಂದು ವಿಡಿಯೋದಲ್ಲಿ ಎಸ್ಕಲೇಟರ್‌ನಲ್ಲಿ ಬರುವಾಗ ವಯಸ್ಸಾದ ವೃದ್ಧೆಯ ಮುಂದೆ ಪ್ರಾಂಕ್ ಮಾಡಿದ್ದು, ಈ ವೇಳೆ ವೃದ್ಧೆ ಗಾಬರಿಗೊಂಡಿದ್ದಾರೆ. ಬಿಎಂಆರ್‌ಸಿಎಲ್ ಅಧಿಕಾರಿಗಳು ಪ್ರ್ಯಾಂಕ್ ಮಾಡಿದ ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆತನ ಹೆಸರು ಪ್ರ್ಯಾಂಕ್ ಪ್ರಜ್ಜು ಎಂಬುದು ತಿಳಿದು ಬಂದಿದೆ. ಈ ವಿಡಿಯೋವನ್ನು ಆತ ತನ್ನದೇ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲಿನಲ್ಲಿ ಗೋಬಿ ಮಂಚೂರಿ ಸೇವನೆ; ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.