ETV Bharat / state

ಕಾವೇರಿ 2 0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸಿ : ಹೈಕೋರ್ಟ್ - ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಕಾವೇರಿ 2.0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ಹೈಕೋರ್ಟ್​ ಸೋಮವಾರ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 22, 2023, 10:56 PM IST

ಬೆಂಗಳೂರು : ಸಮಸ್ಯೆ ರಹಿತ ನೋಂದಣಿ ವ್ಯವಸ್ಥೆೆ ಒದಗಿಸುವ ಉದ್ದೇಶದ ಕಾವೇರಿ 2.0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆೆ ಕುರಿತಂತೆ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

ತಂತ್ರಾಂಶದ ಜಾರಿಯಲ್ಲಿ ಉಂಟಾಗುತ್ತಿರುವ ಸಮಸ್ಯೆ ಕುರಿತಂತೆ ಬಿ ರಾಮಾಚಾರ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ: ಖಾಸಗಿ ಜಮೀನು ವಶಪಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗದು: ಹೈಕೋರ್ಟ್

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಂತ್ರಾಂಶ ಅನುಷ್ಠಾನದಿಂದ ಜನರಿಗೆ ತೊಂದರೆ ಆಗುತ್ತಿದೆ. ನೋಂದಣಿಗೆ ಹಾಜರುಪಡಿಸಿರುವ ದಸ್ತಾವೇಜನ್ನು ತಿರಸ್ಕರಿಸಲು ಅಥವಾ ರದ್ದು ಪಡಿಸಲು ಅವಕಾಶ ನೀಡಲಾಗಿದೆ. ಆದರೆ ನಿಯಮದ ಪ್ರಕಾರ ಆ ರೀತಿ ನೋಂದಣಿಗೆ ಸಲ್ಲಿಸಿದ ದಸ್ತಾವೇಜನ್ನು ತಿರಸ್ಕರಿಸಲು ಅವಕಾಶವಿಲ್ಲ. ಈ ಕುರಿತು ನ್ಯಾಯಾಲಯಗಳ ಹಲವು ಆದೇಶಗಳಿವೆ ಎಂದು ವಿವರಿಸಿದರು.

ಇದನ್ನೂ ಓದಿ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ: ಅಭಯ್​ ಕುಮಾರ್​ ಪಾಟೀಲ್​ ವಿರುದ್ಧ ದೂರು ರದ್ದುಪಡಿಸಿದ ಹೈಕೋರ್ಟ್

ಆದರೆ, ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಈ ವಿಷಯದ ಬಗ್ಗೆೆ ಅರ್ಜಿದಾರರು ಮೇ 2ರಂದು ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಆನಂತರ ಅದರ ಉತ್ತರಕ್ಕೂ ಕಾಯದೆ ಮೇ 5ಕ್ಕೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇಲಾಖೆಗೆ ಮನವಿಗೆ ಉತ್ತರಿಸಲು ಕಾಲಾವಕಾಶ ನೀಡದೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ ಎಂದು ಹೇಳಿತು.

ಇದನ್ನೂ ಓದಿ: ಅನ್ಯಧರ್ಮದ ಯುವಕನೊಂದಿಗೆ ಪ್ರೀತಿ.. ಯುವತಿಗೆ ತನ್ನಿಷ್ಟದ ಸ್ಥಳದಲ್ಲಿ ನೆಲೆಸಲು ಅವಕಾಶ ಕಲ್ಪಿಸಿದ ಹೈಕೋರ್ಟ್

ಅಲ್ಲದೆ, ಅರ್ಜಿದಾರರು ಕಾವೇರಿ 2.0 ತಂತ್ರಾಂಶ ಜಾರಿಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆೆಯೂ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಆ ಬಗ್ಗೆೆ ವಿವರ ನೀಡುವಂತೆ ಸೂಚಿಸಿತು. ಅರ್ಜಿದಾರರ ಪರ ವಕೀಲರು ಸರಿಯಾದ ಉತ್ತರವನ್ನು ನೀಡಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ಕಾವೇರಿ 2.0 ತಂತ್ರಾಂಶ ಪಾರದರ್ಶಕ ವ್ಯವಸ್ಥೆಯಾಗಿದ್ದು, ರಾಜ್ಯಾದ್ಯಂತ ಈಗಾಗಲೇ 152 ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜಾರಿಯಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್​

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿಂಪಡೆಯುವಂತೆ ಸೂಚನೆ: ಅಂತಿಮವಾಗಿ ನ್ಯಾಯಾಲಯ ಅರ್ಜಿದಾರರಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿಂಪಡೆಯುವಂತೆ ಸೂಚನೆ ನೀಡಿತು. ಇದನ್ನು ಸಮ್ಮತಿಸಿದ ಅರ್ಜಿದಾರರ ಪರ ವಕೀಲರು ಒಪ್ಪಿದರು. ಆನಂತರ ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸಂಬಂಧಿಸಿದ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥ ಪಡಿಸಿತು.

ಇದನ್ನೂ ಓದಿ: ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ ಎತ್ತಿಹಿಡಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.