ETV Bharat / state

ನಿರ್ಬಂಧ ಸಡಿಲಿಸದ ಸರ್ಕಾರದ ನಿರ್ಧಾರಕ್ಕೆ ಚಿತ್ರರಂಗ ಗರಂ : ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ನಿಯೋಗ

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್​​, ಕಾರ್ಯದರ್ಶಿ ಎನ್.ಎಂ ಸುರೇಶ್ ಸೇರಿದಂತೆ ವಾಣಿಜ್ಯ ಮಂಡಳಿ ಸದಸ್ಯರ ನಿಯೋಗ ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿ ಸಿಎಂಗೆ ಮನವಿ ಸಲ್ಲಿಸಿತು..

author img

By

Published : Jan 29, 2022, 5:29 PM IST

ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ನಿಯೋಗ
ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ನಿಯೋಗ

ಬೆಂಗಳೂರು : ಸಿನಿಮಾ ಥಿಯೇಟರ್‌ನಲ್ಲಿ‌ 50-50 ರೂಲ್ಸ್ ಮುಂದುವರಿಕೆ ಹಿನ್ನೆಲೆ ಸರ್ಕಾರದ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಅಸಮಾಧಾನಗೊಂಡಿದೆ. ಈ ಸಂಬಂಧ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ ಸಿಎಂ ಬೊಮ್ಮಾಯಿ ಭೇಟಿಯಾಗಿ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡಿತು.

ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್​​, ಕಾರ್ಯದರ್ಶಿ ಎನ್.ಎಂ ಸುರೇಶ್ ಸೇರಿದಂತೆ ವಾಣಿಜ್ಯ ಮಂಡಳಿ ಸದಸ್ಯರ ನಿಯೋಗ ಸಿನಿಮಾ ಥಿಯೇಟರ್‌ನಲ್ಲಿ 50:50 ನಿಯಮ ಮುಂದುವರಿಸಿರುವ ಬಗ್ಗೆ ತಮ್ಮ ಅಸಮಾಧಾನ ಹೊರ ಹಾಕಿತು.

ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ

ಬಳಿಕ ಮಾತನಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ನಾವು ಸೋಮವಾರ ಮತ್ತೊಮ್ಮೆ ಸಿಎಂ ಭೇಟಿ ಮಾಡ್ತೇವೆ. ನಾವು ಎಸ್ಒಪಿ ನಿಯಮಗಳ ಪಾಲನೆ ಮಾಡಿ ಚಿತ್ರಮಂದಿರ ನಡೆಸುತ್ತೇವೆ. ಇದರ ಬಗ್ಗೆ ಸಿಎಂಗೆ ಮಾಹಿತಿ ಕೊಡುತ್ತೇವೆ.

ಚಿತ್ರಮಂದಿರಗಳ ಎಸಿ, ನಾನ್ ಎಸಿ ಮಾಹಿತಿ ಕೊಡುತ್ತೇವೆ. ಹಲವು ಚಿತ್ರಗಳು ಬಿಡುಗಡೆಗೆ ಕಾದಿವೆ. ಈಗಾಗಲೇ ಚಿತ್ರರಂಗಕ್ಕೆ ಸಾಕಷ್ಟು ನಷ್ಟವಾಗಿದೆ. ಮುಂದಿನ‌ ಶುಕ್ರವಾರ ಸರ್ಕಾರ ನಿರ್ಬಂಧ ತೆರವು ಮಾಡುವ ವಿಶ್ವಾಸ ಇದೆ ಎಂದರು.

ಇದೇ ವೇಳೆ ಮಾತನಾಡಿದ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. 100%ಗೆ ಅನುಮತಿ ನೀಡಲು ಕೋರಿದ್ದೇವೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಹಾಗೂ 50% ಮಿತಿಯಿಂದ ಆಗಿರುವ ನಷ್ಟದ ಬಗ್ಗೆ ಮಾಹಿತಿ ನೀಡಿದ್ದೇವೆ.

ಯಾವ ಯಾವ ಸಿನಿಮಾ ಬಿಡುಗಡೆ ಆಗುತ್ತೆ, ಯಾವ ದಿನ ಆಗುತ್ತೆ, ಅದರ ಸಾಧಕ-ಬಾಧಕ ಬಗ್ಗೆ ಸಮಗ್ರ ಮಾಹಿತಿಯನ್ನು ಲಿಖಿತ ರೂಪದಲ್ಲಿ ನೀಡಲು ಹೇಳಿದ್ದಾರೆ. ಅದನ್ನು ಸಮಿತಿ ಮುಂದೆ ಇಟ್ಟು, ಸೋಮಾವಾರ ಅಥವಾ ಮಂಗಳವಾರ ತೀರ್ಮಾನ ಕೈಗೊಳ್ಳುತ್ತೇವೆ ಎಂದು ವಾಗ್ದಾನ ಕೊಟ್ಟಿದ್ದಾರೆ ಎಂದರು.

ಮೂರು ಗಂಟೆಗಳ ಕಾಲ ಜನರು ಥಿಯೇಟರ್‌ನಲ್ಲಿ ಕೂರುತ್ತಾರೆ ಎಂಬ ತಜ್ಞರ ವರದಿ ಅವೈಜ್ಞಾನಿಕವಾಗಿದೆ. ನಾವೆಲ್ಲ ಕೋವಿಡ್ ನಿಯಮ ಪಾಲಿಸುತ್ತೇವೆ. ಡಬಲ್ ಡೋಸ್ ಲಸಿಕೆ ಪಡೆಯುವರಿಗೆ ಪ್ರವೇಶ ಎಲ್ಲವನ್ನೂ ಪಾಲಿಸುತ್ತೇವೆ ಎಂದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.