ETV Bharat / state

ಲಾಕ್​ಡೌನ್​ ವಿಸ್ತರಣೆ ಬಗ್ಗೆ ಜೂನ್​ 6ರ ವೇಳೆಗೆ ಅಂತಿಮ ತೀರ್ಮಾನ: ಬಿಎಸ್​ವೈ - Final decision by June 6 on lockdown extension CM B.S. Yediyurappa

ರಾಜ್ಯದಲ್ಲಿ ಕೋವಿಡ್​ ಪ್ರಕರಣಗಳು ಇಳಿಮುಖದತ್ತ ಸಾಗುತ್ತಿದ್ದು, ನಿನ್ನೆ 20,628 ಮಂದಿಗೆ ಸೋಂಕು ದೃಢಪಟ್ಟಿತ್ತು. ಸೋಂಕಿತರ ಸಂಖ್ಯೆ 25,67,449ಕ್ಕೆ ಏರಿದ್ದು, ಈವರೆಗೆ 21,89,064 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 3,50,066 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತ ಪ್ರಕರಣಗಳ ಪ್ರಮಾಣ ಶೇ. 14.95ರಷ್ಟಿದೆ. ಸಾವಿನ‌ ಪ್ರಮಾಣ ಶೇ. 2.38ರಷ್ಟು‌ ಇದೆ.‌

CM B S Yediyurappa
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿಕೆ
author img

By

Published : May 30, 2021, 12:36 PM IST

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರೆಸುವ ಬಗ್ಗೆ ಜೂನ್​ 6ರವರೆಗಿನ ಸ್ಥಿತಿಗತಿ ನೋಡಿಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ನಗರದ ಕಾವೇರಿ ನಿವಾಸದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಇನ್ನೂ ಕಡಿಮೆ ಆಗಿಲ್ಲ. ಲಾಕ್‌ಡೌನ್ ವಿಸ್ತರಣೆ ಮಾಡಿ ಎಂದು ತಜ್ಞರು ಸದ್ಯ ಯಾವುದೇ ವರದಿ ನೀಡಿಲ್ಲ. ಲಾಕ್‌ಡೌನ್ ವಿಸ್ತರಣೆ ಕುರಿತು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.