ETV Bharat / state

ಬಿಬಿಎಂಪಿ ಚುನಾವಣೆ 2022: ಅಂತಿಮ ಮತದಾರರ ಪಟ್ಟಿ ಪ್ರಕಟ

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

final-voter-list-published-for-bbmp-election
ಬಿಬಿಎಂಪಿ ಚುನಾವಣೆ 2022: ಅಂತಿಮ ಮತದಾರರ ಪಟ್ಟಿ ಪ್ರಕಟ
author img

By

Published : Sep 28, 2022, 10:25 PM IST

ಬೆಂಗಳೂರು : ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2022ರ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಜುಲೈ 29 ರ ಆದೇಶದಂತೆ ವಾರ್ಡ್ ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಸೆಪ್ಟೆಂಬರ್ 9 ರವರೆಗಿನ ಮತದಾರರ ಮಾಹಿತಿಯನ್ನು ಒದಗಿಸಲಾಗಿದ್ದು, ಈ ಮಾಹಿತಿಯನ್ನು ಬಳಸಿಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪೈಕಿ ಪಾಲಿಕೆಯ 243 ವಾರ್ಡ್​​​ಗಳಲ್ಲಿ ಒಟ್ಟು 71,19,563 ಮತದಾರರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇದರಲ್ಲಿ 41,14,383 ಪುರುಷರು ಹಾಗೂ 38,03,747 ಮಹಿಳೆಯರು ಮತ್ತು 1433 ಇತರ ಮತದಾರರಿದ್ದಾರೆ. ಸಾರ್ವಜನಿಕರು ತಮ್ಮ ಹಾಗೂ ಕುಟುಂಬ ಸದಸ್ಯರ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪಾಲಿಕೆ ಹೇಳಿದೆ.

ಅಂತಿಮ ಮತದಾರರ ಪಟ್ಟಿ ಬಿಡುಗಡೆ : ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್​​ಸೈಟ್​​​​ನಲ್ಲಿ ನೀಡಲಾಗುವುದು ಹಾಗೂ ಎಲ್ಲಾ ಮತದಾರರ ನೋಂದಣಾಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲೂ ಹಾಗೂ ವಾರ್ಡ್ ಕಚೇರಿಗಳಲ್ಲೂ ಸಾರ್ವಜನಿಕರ ವೀಕ್ಷಣೆಗೆ ಮಾಹಿತಿ ಲಭ್ಯವಿರಿಸಲಾಗುತ್ತದೆ ಎಂದು ತಿಳಿಸಿದೆ.

ಪಾಲಿಕೆ ಚುನಾವಣೆಯ ಹೊರತಾಗಿ ಆನ್ಲೈನ್ ಮೂಲಕ ಹೊಸ ಅರ್ಜಿ ಸಲ್ಲಿಸಲು ಅವಕಾಶ: ಪಾಲಿಕೆ ಚುನಾವಣೆಯ ಹೊರತಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ ವೋಟರ್ ಹೆಲ್ಪ್ಲೈನ್ ಆಪ್ ಮತ್ತು ಎನ್.ವಿ.ಎಸ್.ಪಿ ಪೋರ್ಟಲ್ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದ್ದು, ನಗರದ ಮತದಾರರು ಸದುಪಯೋಗಪಡಿಸಿಕೊಳ್ಳಲು ಪಾಲಿಕೆ ಕೋರಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ನಡೆದ ಗಲಾಟೆ ಬಗ್ಗೆ ದಾಖಲಾದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.