ETV Bharat / state

ಆರ್ಥಿಕ ಪ್ಯಾಕೇಜ್ ದುಡಿಯುವ ವರ್ಗಗಳಿಗೆ, ಉದ್ಯಮಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ: ಡಿಸಿಎಂ ಕಾರಜೋಳ - ಡಿಸಿಎಂ ಗೋವಿಂದ ಕಾರಜೋಳ ಲೆಟೆಸ್ಟ್​ ನ್ಯೂಸ್​

ಕೋವಿಡ್-19ರ ಸಂಕಷ್ಟದ ಸಂದರ್ಭದಲ್ಲಿ ನವ ಭಾರತ ನಿರ್ಮಾಣಕ್ಕಾಗಿ ಹಾಗೂ ಸ್ವಾವಲಂಬಿ ಭಾರತ ಅಭಿಯಾನಕ್ಕಾಗಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

DCM Govinda Karajola
ಡಿಸಿಎಂ ಗೋವಿಂದ ಕಾರಜೋಳ
author img

By

Published : May 13, 2020, 10:49 PM IST

ಬೆಂಗಳೂರು: 5 ಸ್ತಂಭಗಳ ಆಧಾರದ ಮೇಲೆ ಭಾರತದ ಸ್ವಾವಲಂಭನೆ ಹಾಗೂ ಪುನಶ್ಚೇತನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಇಡೀ ದೇಶದ ಜನ ಮೆಚ್ಚುವಂತದ್ದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಕೋವಿಡ್-19ರ ಸಂಕಷ್ಟದ ಸಂದರ್ಭದಲ್ಲಿ ನವ ಭಾರತ ನಿರ್ಮಾಣಕ್ಕಾಗಿ ಹಾಗೂ ಸ್ವಾವಲಂಬಿ ಭಾರತ ಅಭಿಯಾನಕ್ಕಾಗಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ಗುಡಿ ಕೈಗಾರಿಕೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‍ಎಂಇ) 3 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯವನ್ನು ನೀಡುವುದಲ್ಲದೆ, ಸಾಲ ಮರುಪಾವತಿಗೆ 4 ವರ್ಷ ಕಾಲಾವಕಾಶ ನೀಡಲಾಗಿದೆ. ಇದರಿಂದ 45 ಲಕ್ಷ ಕಿರು ಉದ್ಯಮಿಗಳಿಗೆ ನೆರವಾಗುವುದಲ್ಲದೆ, ದುಡಿಯುವ ವರ್ಗಕ್ಕೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಅನುಕೂಲವಾಗುವುದರ ಜೊತೆಗೆ ದೇಶದ ಆರ್ಥಿಕ ವಹಿವಾಟು ವೃದ್ಧಿಸುವುದು. ದುಡಿಯುವ ವರ್ಗಗಳಿಗೆ ಮತ್ತು ಉದ್ಯಮಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದಿದ್ದಾರೆ.

ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ವಿಸ್ತರಿಸಲು 50 ಸಾವಿರ ಕೋಟಿ ರೂಪಾಯಿ ನೆರವು ನೀಡುವುದರಿಂದ ಉದ್ಯೋಗ ಸೃಷ್ಟಿಸಲು ಅನುಕೂಲವಾಗುತ್ತದೆ. 72 ಲಕ್ಷ ಕಾರ್ಮಿಕರಿಗೆ ಇಪಿಎಫ್ ನೆರವು ನೀಡಲು 2,500 ಕೋಟಿ ರೂ. ನೀಡುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.