ETV Bharat / state

ಅನಧಿಕೃತ ಬಡಾವಣೆ, ಕಟ್ಟಡ ನಿರ್ಮಿಸಿದರೆ ದುಪ್ಪಟ್ಟು ದಂಡ, ಜೈಲು ಶಿಕ್ಷೆಗೆ ಖಂಡ್ರೆ ಸಲಹೆ - ಸ್ಥಳೀಯ ಸಂಸ್ಥೆಗಳ ಕಾಯ್ದೆ

ಅನಧಿಕೃತವಾಗಿ ಬಡಾವಣೆ ನಿರ್ಮಿಸಿದರೆ ದುಪ್ಪಟ್ಟು ತಂಡ ಮತ್ತು ಜೈಲು ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿ ತರುವುದು ಅಗತ್ಯ ಎಂದು ಸಚಿವ ಖಂಡ್ರೆ ತಿಳಿಸಿದರು.

Etv Bharat
Etv Bharat
author img

By ETV Bharat Karnataka Team

Published : Dec 28, 2023, 3:54 PM IST

ಬೆಂಗಳೂರು: ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯಾದ್ಯಂತ ಏಕರೂಪದ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಸಲಹೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ/ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲು ರಚಿಸಲಾಗಿರುವ ಉಪಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಅವರು ಹೇಳಿದರು.

ಅಕ್ರಮ ಬಡಾವಣೆಗೆ ಜೈಲು ಶಿಕ್ಷೆ: ಇನ್ನು ಮುಂದೆ ಯಾರೇ ಆದರೂ ಅನಧಿಕೃತವಾಗಿ ಬಡಾವಣೆ ನಿರ್ಮಿಸಿದರೆ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ನಿಯಮ ಸರಳೀಕರಣ: ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು. ಜೊತೆಗೆ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಹೇಳಿದರು.

ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನುರೀತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೇ ಇಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಡೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆಯೂ ಸಚಿವರು ಸೂಚಿಸಿದರು.

ಇದನ್ನೂ ಓದಿ: ಕನ್ನಡ ನಾಡಿನಲ್ಲಿ ಕನ್ನಡ ಇರಬೇಕು, ಅನ್ಯ ಭಾಷೆಗೆ ವಿರೋಧವಿಲ್ಲ: ಸಿಎಂ, ಡಿಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.