ಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕಾರು ಚಾಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಆರ್. ಆರ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆರ್ ಆರ್ ನಗರ ಉಪಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಕಚೇರಿಯ ನೂರು ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ನಿಯಮ ಗೊತ್ತಿದ್ದರೂ ಸಿದ್ದರಾಮಯ್ಯ ಎಸ್ಕಾರ್ಟ್ ಹಾಗೂ ಪೈಲೆಟ್ ವಾಹನ ಚಾಲಕರು ಉಲ್ಲಂಘನೆ ಮಾಡಿ ನಾಮಪತ್ರ ಸಲ್ಲಿಕೆ ಮಾಡುವಲ್ಲಿಗೆ ನೇರವಾಗಿ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.
ಹೀಗಾಗಿ IPC 353 - ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ,188- ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದರ ಮೇಲೆ ಎಫ್ಐ ಆರ್ ದಾಖಲಾಗಿದ್ದು ಸದ್ಯ ತನಿಖೆ ಮುಂದುವರೆದಿದೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ ವೇಳೆ ಸಿದ್ದರಾಮಯ್ಯ ಸಹ ತೆರಳಿದ್ದರು. ಆದರೆ 100 ಮೀಟರ್ ದೂರದಲ್ಲಿ ಹಾಕಿದ್ದ ಬ್ಯಾರಿಕೇಡ್ ತೆಗೆದು ಒಳಗಡೆ ಹೋದ ಕಾರಣ ಚಾಲಕರ ಮೇಲೆ ಎಫ್ಐ ಆರ್ ದಾಖಲಿಸಲಾಗಿದೆ.