ETV Bharat / state

ಕೋವಿಡ್ ನಿಯಮ ಉಲ್ಲಂಘನೆ : ಮಾಜಿ ಶಾಸಕರ ವಿರುದ್ಧ ಎಫ್ಐಆರ್ ದಾಖಲು - ಮಾಜಿ ಶಾಸಕರ ವಿರುದ್ಧ ಎಫ್ಐಆರ್ ದಾಖಲು

ಫೆ. 21ರಂದು ಆಯೋಜನೆ ಮಾಡಿದ್ದ ಸಮಾವೇಶದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್​ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ.

MLA Vijayanand kashappanavar
MLA Vijayanand kashappanavar
author img

By

Published : Mar 25, 2021, 1:18 AM IST

ಬೆಂಗಳೂರು : ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2Aಗೆ ಸೇರಿಸುವಂತೆ ಆಗ್ರಹಿಸಿ ನಡೆಸಲಾಗಿದ್ದ ಸಮಾವೇಶದ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್‌ಕಿಟ್ ಫೌಂಡೇಷನ್ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.ಈ ವೇಳೆ ಸರ್ಕಾರದ ಪರ ವಕೀಲರು ಮೆಮೋ ಸಲ್ಲಿಸಿ, ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಫೆ.21ರಂದು ನಡೆದ ಸಮಾವೇಶದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಸಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಮಾವೇಶದಲ್ಲಿ 80 ಸಾವಿರ ಮಂದಿ ಭಾಗಿಯಾಗಿದ್ದರು. ಫ್ರೀಡಂ ಪಾರ್ಕ್​​ವರೆಗಿನ ರ‍್ಯಾಲಿಯಲ್ಲಿ 4 ಸಾವಿರ ಜನರು ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದರು. ಅರ್ಜಿಯ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದ ಸರ್ಕಾರ, ಮಾರ್ಗಸೂಚಿ ಉಲ್ಲಂಘನೆ ಆರೋಪದಲ್ಲಿ ಕಾಶಪ್ಪನವರ್ ಅವರಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದಿತ್ತು. ಅದಕ್ಕೆ ಆಕ್ಷೇಪಿಸಿದ್ದ ಪೀಠ, ಮಾರ್ಗಸೂಚಿ ಉಲ್ಲಂಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಕೇವಲ ದಂಡ ವಿಧಿಸುತ್ತಿರುವುದೇಕೆ? ಎಂದು ಪ್ರಶ್ನಿಸಿತ್ತು. ಅಲ್ಲದೆ, ನಿಯಮ ಉಲ್ಲಂಘಿಸಿದವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸುವಂತೆ ತಾಕೀತು ಮಾಡಿತ್ತು.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

ದಂಡ ವಸೂಲಿ ವಿವರ: ಮಾಸ್ಕ್ ಧರಿಸದೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಸುವವರಿಗೆ ವಿಧಿಸಲಾಗುವ ದಂಡದ ಮೊತ್ತ ಹಾಗೂ ದಂಡ ಸ್ವೀಕರಿಸಲಿರುವ ಅಧಿಕಾರಿಗಳ ವಿವರಗಳನ್ನು ಸರ್ಕಾರ ಪ್ರಮಾಣಪತ್ರದೊಂದಿಗೆ ನ್ಯಾಯಾಲಯಕ್ಕೆ ಸಲ್ಲಿಸಿತು. ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಸುವವರಿಗೆ 250 ರೂ. ಹಾಗೂ ಇತರ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುತ್ತಿದೆ. ಮಾರ್ಗಸೂಚಿ ಪಾಲನೆ ಮಾಡದ ಪಾರ್ಟಿ ಹಾಲ್‌ಗಳಿಗೆ 5 ಸಾವಿರ, ಎಸಿ ಪಾರ್ಟಿ ಹಾಲ್, ಶೋರೂಂಗಳು, ಕಲ್ಯಾಣ ಮಂಟಪ, ಸ್ಟಾರ್ ಹೋಟೆಲ್‌ಗಳಿಗೆ 10 ಸಾವಿರ ರೂ. ಹಾಗೂ ರ‍್ಯಾಲಿ, ಸಾರ್ವಜನಿಕ ಸಭೆಗಳ ಆಯೋಜಕರಿಗೆ 10 ಸಾವಿರ ದಂಡ ವಿಧಿಸಲಾಗುತ್ತಿದೆ.

ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಬಿಎಂಪಿ ಮಾರ್ಷಲ್‌ಗಳು, ಹೆಡ್ ಕಾನ್‌ಸ್ಟೆಬಲ್ ಹಾಗೂ ಅದಕ್ಕೂ ಮೇಲಿನ ಪೊಲೀಸ್ ಅಧಿಕಾರಿಗಳು, ಹೆಲ್ತ್ ಇನ್‌ಸ್ಪೆಕ್ಟರ್‌ಗಳು ಹಾಗೂ ಬಿಲ್ ಕಲೆಕ್ಟರ್‌ಗಳು ದಂಡ ಸ್ವೀಕರಿಸಲಿದ್ದಾರೆ. ಇತರ ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು, ಪಿಡಿಒಗಳು, ಗ್ರಾ.ಪಂ. ಕಾರ್ಯದರ್ಶಿಗಳು, ಸ್ಥಳೀಯ ಸಂಸ್ಥೆಗಳ ಹೆಲ್ತ್ ಇನ್‌ಸ್ಪೆಕ್ಟರ್ ಹಾಗೂ ಬಿಲ್ ಕಲೆಕ್ಟರ್‌ಗಳು ದಂಡ ವಸೂಲಿ ಮಾಡಲಿದ್ದಾರೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ.

ಯುವರತ್ನ ಸಿನಿಮಾ ಪ್ರಚಾರದ ವೇಳೆ ನಿಯಮ ಉಲ್ಲಂಘನೆ: ವಿಚಾರಣೆ ವೇಳೆ ಬಿಜೆಪಿ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ ಸಭೆ, ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಮಧ್ಯಂತರ ಅರ್ಜಿದಾರರ ಪರ ವಕೀಲರಾದ ಜಿ.ಆರ್. ಮೋಹನ್ ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಡೆಸಿದ ರ‍್ಯಾಲಿ ಹಾಗೂ ನಟ ಪುನೀತ್ ರಾಜ್‌ಕುಮಾರ್ ಅವರ ಯುವರತ್ನ ಚಿತ್ರತಂಡ ಆಯೋಜಿಸಿದ್ದ ಸಮಾರಂಭಗಳಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಫೋಟೋಗಳನ್ನು ಸಲ್ಲಿಸಿದರು. ಪೋಟೋಗಳನ್ನು ಪರಿಶೀಲಿಸಿದ ಪೀಠ, ಕಾರ್ಯಕರ್ತರಿಗೆ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಹೇಳಿದ್ದೀರಿ. ಆದರೆ, ರಾಯಚೂರಿನಲ್ಲಿ ನಡೆದಿರುವ ರ‍್ಯಾಲಿಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಈ ಕುರಿತು ವಿರವಣೆ ನೀಡಬೇಕು ಎಂದು ಬಿಜೆಪಿ ಪರ ವಕೀಲರಿಗೆ ಸೂಚಿಸಿತು. ಅಲ್ಲದೇ ಬಿಜೆಪಿ ರ‍್ಯಾಲಿ ಹಾಗೂ ಯುವರತ್ನ ಚಿತ್ರದ ಸಮಾರಂಭಗಳಲ್ಲಿ ನಿಯಮ ಉಲ್ಲಂಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಏ.8ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.