ಆನೇಕಲ್/ಬೊಮ್ಮನಹಳ್ಳಿ: ಬೆಂಗಳೂರು ನಗರದ ಪ್ರತಿಷ್ಠಿತ ಆಸ್ಪತ್ರೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕೋವಿಡ್ ನಿಯಮಗಳನ್ನು ಪಾಲನೆ ಮಾಡದ ಹಿನ್ನೆಲೆ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಈ ಹಿಂದೆ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ನಡೆಸಿ, ಕಾರಣ ಕೇಳಿ ನೋಟಿಸ್ ನೀಡಿದ್ದರು. ಈಗ ಆಸ್ಪತ್ರೆಯ ವಿರುದ್ಧ ಕ್ರಮಕ್ಕಾಗಿ ದೂರು ದಾಖಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬೊಮ್ಮನಹಳ್ಳಿ ಬಿಬಿಎಂಪಿ ವಲಯ ಆಡಳಿತ ನಿರ್ವಹಣಾಧಿಕಾರಿ ರಾಜೇಂದ್ರ ಚೋಳನ್ ಮತ್ತು ಜಂಟಿ ಆಯುಕ್ತ ರಾಮಕೃಷ್ಣಪ್ಪ ಆಸ್ಪತ್ರೆಗೆ ನೋಟಿಸ್ ನೀಡಿದ್ದರು. ಕೋವಿಡ್ ಬೆಡ್ಗಳನ್ನು ನೀಡದೆ, ರೋಗಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಸಹ ಆಸ್ಪತ್ರೆಯ ವಿರುದ್ಧ ಕೇಳಿಬಂದಿದೆ.