ETV Bharat / state

ಮೆಟ್ರೋ ಪಿಲ್ಲರ್ ದುರಂತ: ನಿರ್ಮಾಣ ಕಂಪನಿ, ಬಿಎಂಆರ್​ಸಿಎಲ್​ನ 8 ಜನರ ವಿರುದ್ಧ ಪ್ರಕರಣ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ - 8 ಮಂದಿ ವಿರುದ್ಧ ಕೇಸ್​ ದಾಖಲು - ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ.

Bengaluru metro pillar collapse case
ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್
author img

By

Published : Jan 11, 2023, 1:12 PM IST

ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿರುವುದು..

ಬೆಂಗಳೂರು: ನಗರದಲ್ಲಿ ಮಂಗಳವಾರ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗುವಿನ ದುರಂತ ಸಾವಿಗೆ ಕಾರಣವಾದ ಆರೋಪದಡಿ 8 ಜನರ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಮಾಣದ ಹೊಣೆ ಹೊತ್ತಿದ್ದ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ, ಅದರ ಜ್ಯೂನಿಯರ್ ಇಂಜಿನಿಯರ್ ಪ್ರಭಾಕರ್, ನಿರ್ದೇಶಕ ಚೈತನ್ಯ, ಸ್ಪೆಷಲ್ ಪ್ರಾಜೆಕ್ಟ್ ಮ್ಯಾನೇಜರ್ ಮಥಾಯ್, ಪ್ರಾಜೆಕ್ಟ್ ಮ್ಯಾನೇಜರ್ ವಿಕಾಸ್ ಸಿಂಗ್, ಸೂಪರ್​ವೈಸರ್ ಲಕ್ಷ್ಮೀಪತಿ, ಬಿಎಂಆರ್​ಸಿಎಲ್​​ನ ವೆಂಕಟೇಶ್ ಶೆಟ್ಟಿ ಹಾಗೂ ಎಕ್ಸಿಕ್ಯುಟಿವ್ ಇಂಜಿನಿಯರ್ ಮಹೇಶ್ ಬೆಂಡೆಕೇರಿ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಕುರಿತು ಮಾತನಾಡಿದ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್, 'ಮೃತಳ ಪತಿ ಲೋಹಿತ್ ನೀಡಿರುವ ದೂರಿನನ್ವಯ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿ ಐವರ ಹೆಸರುಗಳನ್ನ ಕೊಟ್ಟಿದಾರೆ. ನಾವು ಪ್ರಕರಣದಲ್ಲಿ ಯಾರ ಹೆಸರೂ ಉಲ್ಲೇಖ ಮಾಡಿರಲಿಲ್ಲ. ಈಗಾಗಲೇ ತನಿಖೆ ಮುಂದುವರೆಸಿದ್ದು, ಕನ್‌ಸ್ಟ್ರಕ್ಷನ್ ಕಂಪನಿ, ಬಿಎಂಆರ್​ಸಿಎಲ್ ಅಧಿಕಾರಿಗಳಿಗೆ ನೋಟಿಸ್​ ನೀಡಿದ್ದೇವೆ. ಈಗಾಗಲೇ ಬಿಎಂಆರ್​ಸಿಎಲ್ ಅಧಿಕಾರಿಗಳು ವಿಚಾರಣೆಗೆ ಬಂದಿದ್ದು ವಿಚಾರಣೆ ನಡೆಸಲಾಗುತ್ತಿದೆ' ಎಂದಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಈಗಲೇ ಯಾರದ್ದು ತಪ್ಪು ಅಂತಾ ಹೇಳಲು ಸಾಧ್ಯವಿಲ್ಲ. ಮತ್ತಷ್ಟು ವಿಚಾರಣೆಯ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ.. ನಾಗವಾರ ರಿಂಗ್ ರಸ್ತೆಯ ಹೆಚ್​ಬಿಆರ್​ ಲೇಔಟ್​​ನಲ್ಲಿ ನಿನ್ನೆ(ಮಂಗಳವಾರ) ಬೆಳಗ್ಗೆ 10:30ರ ಸುಮಾರಿಗೆ ಗದಗ ಮೂಲದ ಸಿವಿಲ್ ಇಂಜಿನಿಯರ್ ಲೋಹಿತ್, ಪತ್ನಿ ತೇಜಸ್ವಿನಿ ಮತ್ತು ಇಬ್ಬರು ಅವಳಿ ಮಕ್ಕಳೊಂದಿಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಡಲು ಮಾನ್ಯತಾ ಟೆಕ್​ಪಾರ್ಕ್​ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರನೇ ಕುಸಿದಿದೆ. ಘಟನೆಯಲ್ಲಿ ತೇಜಸ್ವಿನಿ (35) ಮತ್ತು ಎರಡೂವರೆ ವರ್ಷದ ಗಂಡು ಮಗು ವಿಹಾನ್ ಸಾವನ್ನಪ್ಪಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ಲೋಹಿತ್ ಮತ್ತು ಅವರ ಎರಡೂವರೆ ವರ್ಷದ ಮಗಳು ವಿಸ್ಮಿತಾ ಪಾರಾಗಿದ್ದರು.

ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಪೊಲೀಸರ ಮನವೊಲಿಕೆ ಬಳಿಕ ಮೃತದೇಹ ಸ್ವೀಕರಿಸಿದ ಕುಟುಂಬಸ್ಥರು

ಅವಘಡ ನೆನೆದು ಕಣ್ಣೀರಿಟ್ಟ ಪತಿ.. ಮೃತ ತೇಜಸ್ವಿನಿ ಅವರ ಪತಿ ಲೋಹಿತ್ ಮಾತನಾಡಿ, 'ನನ್ನ ಹೆಂಡತಿ ಪಿಲ್ಲರ್ ಬೀಳ್ತಾ ಇದೆ ಅಂತಾ ಹೇಳಿದ್ಳು. ಆದರೆ ಅಷ್ಟೋತ್ತಿಗೆ ಈತರ ಆಗಿ ಹೋಯಿತು. ನನ್ನ ಮುಂದೆ ಹೋಗ್ತಾ ಇರೋರು‌ ಕೂಡ ಸನ್ನೆ ಮಾಡಿದರು. ನಾನೇ ಹೋಗಿದ್ದರೆ ಚೆನ್ನಾಗಿ ಇರೋದು. ಆದರೆ ನನ್ನ ಹೆಂಡತಿ‌ ಮಗನನ್ನ ಕಳೆದುಕೊಂಡೆ' ಎಂದು ಅವಘಡ ನೆನೆದು ಕಣ್ಣೀರಿಟ್ಟರು. ಮಾತ್ರವಲ್ಲದೇ ಸಂಬಂಧಪಟ್ಟ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವವರೆಗೂ ಮೃತದೇಹವನ್ನ ಸ್ವೀಕರಿಸುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಅಂತಿಮವಾಗಿ ಪೊಲೀಸರ ಮನವೊಲಿಕೆ ಬಳಿಕ ತೇಜಸ್ವಿನಿ ಕುಟುಂಬಸ್ಥರು ಮೃತದೇಹವನ್ನ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಣಮಟ್ಟದ ಪರೀಕ್ಷೆಗೆ ಐಐಎಸ್​ಸಿಗೆ ಮನವಿ.. ಘಟನೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಗೆ ಮನವಿ ಮಾಡಲಾಗುವುದು. ಆಂತರಿಕ ತಾಂತ್ರಿಕ ತಂಡವೂ ಈ ಬಗ್ಗೆ ತನಿಖೆ ನಡೆಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್​ಸಿಎಲ್) ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ.. ತಾಯಿ ಮಗ ಸಾವು, ಅಪ್ಪ ಮಗಳ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.