ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬೆಂಗಳೂರು ನಗರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ (ಕೆಜಿಎಫ್ ಬಾಬು) ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯಲಹಂಕದ ತಹಶಿಲ್ದಾರ್ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಕೆಜಿಎಫ್ ಬಾಬು, ನನ್ನನ್ನು ಗೆಲ್ಲಿಸಿದರೆ 5 ಸಾವಿರ, 10 ಸಾವಿರ, 50 ಸಾವಿರ ಹಾಗೂ ಒಂದು ಲಕ್ಷ ಜೀವ ವಿಮೆ ಲೆಕ್ಕದಲ್ಲಿ ತಲಾ 5 ಲಕ್ಷ ರೂ. ಹಣ ಕೊಡುವುದಾಗಿ ಬಹಿರಂಗವಾಗಿ ಮತದಾರರಿಗೆ ಹೇಳುತ್ತಿದ್ದಾರೆ. ಈ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ವಿಧಾನಪರಿಷತ್‌ನ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್(ಕೆಜಿಎಫ್ ಬಾಬು) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಆರ್‌ಟಿಎ ಕಾರ್ಯಕರ್ತ ಎ. ಆಲಂ ಪಾಷ ಎಂಬುವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.
ವಿಧಾನಪರಿಷತ್‌ನ ಕಾಂಗ್ರೆಸ್ ಅಭ್ಯರ್ಥಿ ಯೂಸಫ್ ಶರೀಫ್ ಅವರು ಕ್ಷೇತ್ರದ ಅಭಿವೃದ್ಧಿಗೆ 500 ಕೋಟಿ ರೂ. ನೀಡುವುದಾಗಿ ಘೋಷಿಸುವ ಮೂಲಕ ಮತದಾರರಿಗೆ ಹಣದ ಆಮೀಷವೊಡ್ಡಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ್ದರೆ ನಮ್ಮ ಕ್ಷೇತ್ರದ ಅಭಿವೃದ್ಧಿಗೆ 500 ಕೋಟಿ ರೂ. ನೀಡುವುದಾಗಿ ಕಳೆದ 12 ದಿನಗಳ ಹಿಂದೆ ಮಾಧ್ಯಮಗಳ ಮೂಲಕ ಯೂಸುಫ್ ಷರೀಫ್ ಹೇಳಿಕೆ ನೀಡಿದ್ದಾರೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ದೂರು ನೀಡಿದ್ದಾರೆ. ಮತ್ತೊಂದೆಡೆ ಯೂಸಫ್ ಶರೀಫ್ ರಾಜ್ಯ ಚುನಾವಣಾ ಆಯೋಗಕ್ಕೂ ಸಹ ದೂರು ನೀಡಲಾಗಿದೆ.
247 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದ ಏರ್ ಇಂಟೆಲಿಜೆನ್ಸ್ ಯುನಿಟ್