ಬೆಂಗಳೂರು : ಮತದಾರರಿಗೆ ಹಂಚಲು ದಿನಬಳಕೆ ವಸ್ತುಗಳ ಕಿಟ್ ಸಂಗ್ರಹಿಸಿಟ್ಟುಕೊಂಡಿದ್ದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಗಾಂಧಿನಗರ ಕ್ಷೇತ್ರದ ಟೆಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಯ್ಯ ಶೆಟ್ಟಿ ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಅಕ್ಕಿ, ಬೆಳೆ, ಬೆಲ್ಲ, ಡ್ರೈಫ್ರೂಟ್ಸ್, ಆಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆಯ ವಸ್ತುಗಳ ಕಿಟ್ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು, ಕೃಷ್ಣಯ್ಯ ಶೆಟ್ಟಿ ಮತ್ತು ಗಾಂಧಿನಗರ ಕ್ಷೇತ್ರದ ಹೆಸರನ್ನೊಳಗೊಂಡ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ಚುನಾವಣಾಧಿಕಾರಿಗಳ ದೂರಿನನ್ವಯ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ಣಯ್ಯ ಶೆಟ್ಟಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ : ಶಶಿಕಲಾ ಜೊಲ್ಲೆ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು
ಈ ಹಿಂದೆ ಮಾರ್ಚ್ 31 ರಂದು ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅರಿಶಿನ-ಕುಂಕುಮ ಕಾರ್ಯಕ್ರಮದದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇರೆಗೆ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ಧ್ವಜ ಹಾಗೂ ಸಂಸದ ಅಣ್ಣಸಾಬ್ ಜೊಲ್ಲೆ ಭಾವಚಿತ್ರ ಇರುವ ಹಾಡು ಹಾಕಿ ಜನರಿಗೆ ಮನರಂಜನೆ ನೀಡುವ ಜೊತೆಗೆ ಕಾರ್ಯಕ್ರಮ ಮುಗಿದ ನಂತರ ನೂರಾರು ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದಾರೆ.
ಇದನ್ನೂ ಓದಿ : ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು
ಎಂ.ಪಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಸಹ ಮಾರ್ಚ್ 31 ರಂದು ಎಫ್‌ಐಆರ್ ದಾಖಲಾಗಿದೆ. ಕ್ಷೇತ್ರದ ಹಲವು ಗ್ರಾಮಗಳಲ್ಲಿ ಸ್ವಸಹಾಯ ಗುಂಪುಗಳಿಗೆ ಸರ್ಕಾರದ ಚೆಕ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಮಹಿಳೆಯರು ಆಗಮಿಸಿದ್ದರು. ಕೆಲ್ಲೂರು ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ಎಲ್ಲಾ ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಅನೇಕ ಜನ ಶಾಸಕರ ನಿವಾಸದಲ್ಲಿ ಸೇರಿದ್ದರು. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಚುನಾವಣಾ ಆಯೋಗದ ತಂಡ ಶಾಸಕರ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿ, ಪ್ರಕರಣ ದಾಖಲಿಸಿದೆ.
ಇದನ್ನೂ ಓದಿ : ಶಾಸಕ ರೇಣುಕಾಚಾರ್ಯ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಟಿಕೆಟ್ ಇದ್ದರೂ ಚಿತ್ರಮಂದಿರದಲ್ಲಿ ನರಿಕ್ಕುವರ್ ಮಹಿಳೆಗೆ ಪ್ರವೇಶ ನಿರಾಕರಣೆ ಆರೋಪ: ಸಿಬ್ಬಂದಿ ವಿರುದ್ಧ ಕೇಸ್