ETV Bharat / state

ಸುಧಾಕರ್ ಮೇಲೆ ಹಲ್ಲೆ ಆರೋಪ : ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ವಿರುದ್ಧ ಎಫ್ಐಆರ್

ಅನರ್ಹ ಶಾಸಕ ಸುಧಾಕರ್ ಮೇಲೆ ಹಲ್ಲೆ ಅರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ಅನರ್ಹ ಶಾಸಕ ಡಾ.ಕೆ.ಸುಧಾಕರ್
author img

By

Published : Aug 12, 2019, 5:11 PM IST

ಬೆಂಗಳೂರು : ಅನರ್ಹ ಶಾಸಕ ಡಾ.ಕೆ.ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಜುಲೈ 10ರಂದು ವಿಧಾನಸೌಧ‌ದಲ್ಲಿ ಅನರ್ಹ ಶಾಸಕ ಸುಧಾಕರ್ ಅವರು ಸ್ಪೀಕರ್ ಗೆ ರಾಜೀನಾಮೆ ನೀಡಿ ಬರುವಾಗ, ವಿಧಾನಪರಿಷತ್ ಸದಸ್ಯ ನಜೀರ್ ಮೊಹಮ್ಮದ್ ಸೇರಿದಂತೆ ಇತರರು ಕುತ್ತಿಗೆ ಹಿಡಿದು ಎಳೆದಾಡಿದ್ದರು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಪ್ರಕರಣ ದಾಖಲಾಗಿರಲಿಲ್ಲ.

ಈ‌ ನಡೆ ವಿರೋಧಿಸಿ ಹೈಕೋರ್ಟ್​ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಸಂದರ್ಭದಲ್ಲಿ ತನ್ನ ಮೇಲೆ ಹಲ್ಲೆ‌ ಆಗಿದೆ. ಹಲ್ಲೆ ಸಂದರ್ಭದಲ್ಲಿ ಪೊಲೀಸರು ತನ್ನ ಸುತ್ತಲೂ ನೆರೆದಿದ್ದರು‌. ಅಲ್ಲದೇ, ತನ್ನನ್ನು ಒತ್ತಾಯ ಪೂರ್ವಕವಾಗಿ ಮಾಜಿ ಸಚಿವ ಜಾರ್ಜ್ ಕೊಠಡಿಯಲ್ಲಿ ಬಂಧಿಸಲಾಗಿತ್ತು. ಈ‌ ಘಟನೆ ಬಗ್ಗೆ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದೇ ಆದರೆ, ಪೊಲೀಸರು‌ ದೂರು ದಾಖಲಿಸಿಲ್ಲ. ಪ್ರಥಮ ವರ್ತಮಾನ ವರದಿ ಸಿದ್ದಪಡಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು‌.‌

ಈ ಸಂಬಂಧ ವಿಚಾರಣೆ ನಡೆಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿತ್ತು. ಘಟನೆ ಹಿನ್ನೆಲೆಯಲ್ಲಿ ಮೇಲ್ಮನೆ ಸದಸ್ಯ ನಜೀರ್ ಅಹಮದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಿಧಾನಸೌಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Intro:Body:ಅನರ್ಹ ಶಾಸಕ ಸುಧಾಕರ್ ಮೇಲೆ ಹಲ್ಲೆ ಆರೋಪ: ಮೇಲ್ಮನೆ ಸದಸ್ಯ ನಜೀರ್ ಅಹಮದ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಅನರ್ಹ ಶಾಸಕ ಡಾ.ಕೆ.ಸುಧಾಕರ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಜುಲೈ 10ರಂದು ವಿಧಾನಸೌಧ‌ದಲ್ಲಿ ಅನರ್ಹ ಶಾಸಕ ಸುಧಾಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಸ್ಪೀಕರ್ ಗೆ ರಾಜೀನಾಮೆ ನೀಡಿ ಬರುವಾಗ ಈ ವೇಳೆ ವಿಧಾನಪರಿಷತ್ ಸದಸ್ಯ ನಜೀರ್ ಮೊಹಮ್ಮದ್ ಸೇರಿದಂತೆ ಇತರರು ಕುತ್ತಿಗೆ ಹಿಡಿದು ಎಳೆದಾಡಿದ್ದರು. ತಮ್ಮ ಮೇಲಿನ ಹಲ್ಲೆ ನಡೆದ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆ ದೂರು ನೀಡಿದರೂ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಈ‌ ನಡೆ ವಿರೋಧಿಸಿ ಹೈಕೋರ್ಟ್ ರಿಟ್ ಅರ್ಜಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಸಂದರ್ಭದಲ್ಲಿ ತನ್ನ ಮೇಲೆ ಹಲ್ಲೆ‌ ಆಗಿದೆ. ಹಲ್ಲೆ ಸಂದರ್ಭದಲ್ಲಿ ಪೊಲೀಸರು ತನ್ನ ಸುತ್ತಲೂ ನೆರೆದಿದ್ದರು‌ ಅಲ್ಲದೇ, ತನ್ನನ್ನು ಒತ್ತಾಯಪೂರ್ವಕವಾಗಿ ಮಾಜಿ ಸಚಿವ ಜಾರ್ಜ್ ಕೊಠಡಿಯಲ್ಲಿ ಬಂಧಿಸಲಾಗಿತ್ತು. ಈ‌ ಘಟನೆ ಬಗ್ಗೆ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದೆ ಆದರೆ ಪೊಲೀಸರು‌ ದೂರನ್ನು ದಾಖಲಿಸಿಲ್ಲ. ಪ್ರಥಮ ವರ್ತಮಾನ ವರದಿ ಸಿದ್ದಪಡಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು‌.‌
ಈ ಸಂಬಂಧ ವಿಚಾರಣೆ ನಡೆಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿತ್ತು. ಘಟನೆ ಹಿನ್ನೆಲೆಯಲ್ಲಿ ಮೇಲ್ಮನೆ ಸದಸ್ಯ ನಜೀರ್ ಅಹಮದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಿಧಾನಸೌಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.