ಬೆಂಗಳೂರು : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಪತ್ರಿಭಟಿಸಿದ ಹಿನ್ನೆಲೆ ಅವರ ವಿರುದ್ಧ ಹೈಗ್ರೌಂಡ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದ ಹಿನ್ನೆಲೆ ಕಾಂಗ್ರೆಸ್ ನಾಯಕರ ಮೇಲೆ ಎಫ್ಐಆರ್ ದಾಖಲಾಗಿದೆ.
ಏಪ್ರಿಲ್ 14ರಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ರು. ಯಾವುದೇ ಅನುಮತಿ ಪಡೆಯದೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿದ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ A1, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ A2, ರಂದೀಪ್ ಸಿಂಗ್ ಸುರ್ಜೇವಾಲಾ A3 ಸೇರಿಂದತೆ 36 ನಾಯಕರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ ಸಂಚಾರಕ್ಕೆ ಅಡ್ಡಪಡಿಸಿ ಪತ್ರಿಭಟನೆ ನಡೆಸಿದ ಆರೋಪ ಹಿನ್ನೆಲೆ ಹೈಗ್ರೌಂಡ್ ಠಾಣೆಯಲ್ಲಿ IPC 143, 341 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.