ಬೆಂಗಳೂರು: ರಮಡ ಹೋಟೆಲ್ನಲ್ಲಿ ಅನುಮತಿ ಇಲ್ಲದೆ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಮೇಲೆ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಧ್ಯ ಪ್ರದೇಶದ ಕೆಲ ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ಯಲಹಂಕ ಬಳಿಯಿರುವ ರಮಡ ಹೋಟೆಲ್ ಬಳಿ ಪೊಲೀಸರು ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಕೆಪಿಐ ಕಾಯ್ದೆ 71ರ ಅಡಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಿಗ್ವಿಜಯ್ ಸಿಂಗ್ ಹಾಗೂ ಇತರ ಕೆಲ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.