ಬೆಂಗಳೂರು: ಕಾಂತಾರ ಚಿತ್ರದಲ್ಲಿನ ಭೂತಕೋಲ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ನೀಡಿದ ಹೇಳಿಕೆ ಖಂಡಿಸಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಶೇಷಾದ್ರಿಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಮತ್ತು ಜಾತಿ-ಜಾತಿ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡ್ತಿದ್ದಾರೆಂದು ಆರೋಪಿಸಿ ನಟ ಚೇತನ್ ವಿರುದ್ಧ ದೂರು ದಾಖಲಿಸಲಾಗಿದೆ. ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ, ಅದು ಬುಡಕಟ್ಟು ಜನಾಗಂದ ಸಂಸ್ಕೃತಿ, ಆದ್ರೆ ರಿಷಬ್ ಶೆಟ್ಟಿ ಇದನ್ನು ಹಿಂದೂ ಸಂಸ್ಕೃತಿ ಅಂತ ಹೇಳುತ್ತಿದ್ದಾರೆ ಎಂದು ಚೇತನ್ ಅಭಿಪ್ರಾಯಪಟ್ಟಿದ್ದರು.
ದೂರು ದಾಖಲಾದ ಹಿನ್ನೆಲೆ ನಟ ಚೇತನ್ಗೆ ಪೊಲೀಸರು ನೋಟಿಸ್ ನೀಡಿದ್ದು, ಭಾನುವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಟ ಚೇತನ್ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿವೆ.
(ಓದಿ: ಕೆಲವರು ಚೀಪ್ ಪಬ್ಲಿಸಿಟಿಗೋಸ್ಕರ ಈ ರೀತಿ ಹೇಳಿಕೆ ನೀಡುತ್ತಾರೆ : ಪೇಜಾವರ ಶ್ರೀ)