ಬೆಂಗಳೂರು : ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಗರ ದಕ್ಷಿಣ ಸಿಇಎನ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ಧಪ್ಪ ಗಾರ್ಡನ್ ನಿವಾಸಿ ಲಕ್ಷ್ಮಿನಾರಾಯಣ್ ಎಂಬುವರು ನೀಡಿದ ದೂರಿನ ಮೇರೆಗೆ ಸಂಬರಗಿ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರೈಸ್ತ ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತಂತೆ ಆಕ್ಷೇಪಾರ್ಹ ರೀತಿಯಲ್ಲಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಅಂತ್ಯಕ್ರಿಯೆ ಮಾಡುವಾಗ ಅಚ್ಚರಿ.. ಕಣ್ತೆರೆದು ಮಾತಾಡಿದ 'ಮೃತ ತಾತ'..!