ಬೆಂಗಳೂರು: ನಗರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಕೋಣನಕುಂಟೆ ಕ್ರಾಸ್ ಬಳಿ ಇರುವ ಡೈಸಿ ಡೀಡ್ ಗಾರ್ಮೆಂಟ್ಸ್ನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದೆ.
ಗಾರ್ಮೆಂಟ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಗಾರ್ಮೆಂಟ್ಸ್ ಕಟ್ಟಡದ ಮೊದಲ ಮಹಡಿ ಹೊತ್ತಿ ಉರಿದಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮುರುಡೇಶ್ವರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ನೀರು ಪಾಲು: ಓರ್ವನ ಶವ ಪತ್ತೆ