ಬೆಂಗಳೂರು: ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಇರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಸವಿ ಸಾಗರ್ ಹೋಟೆಲ್ನ ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿ ಸ್ವಲ್ಪ ಹೊತ್ತು ಹೋಟೆಲ್ ಸಿಬ್ಬಂದಿ ಹಾಗೂ ಮೆಟ್ರೋ ಸಿಬ್ಬಂದಿಯನ್ನ ಬೆಚ್ಚಿ ಬೀಳಿಸುವಂತೆ ಮಾಡಿದೆ.
ಮೆಟ್ರೋ ನಿಲ್ದಾಣದ ಕೆಳಭಾಗದಲ್ಲಿ ಈ ಹೋಟೆಲ್ ಇದ್ದು ಹೆಚ್ಚಿನ ಅವಘಡ ಸಂಭವಿಸಿದರೆ ಮೆಟ್ರೋ ಹಳಿಗೆ ತೊಂದರೆಯಾಗುವ ಸಾಧ್ಯತೆ ಇತ್ತು, ತಕ್ಷಣ ಹೋಟೆಲ್ ಸಿಬ್ಬಂದಿ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಾಜಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.