ETV Bharat / state

ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಹರಸಾಹಸ

author img

By

Published : Jan 29, 2021, 1:14 PM IST

ಕಗ್ಗಲೀಪುರ - ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿರುವ ವಿಜಯಲಕ್ಷ್ಮಿ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ.

Fire at Agarbatti factory
ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ

ಕಗ್ಗಲೀಪುರ: ಕನಕಪುರ - ಬೆಂಗಳೂರು ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಕಗ್ಗಲೀಪುರ - ಬನ್ನೇರುಘಟ್ಟ ಮುಖ್ಯ ರಸ್ತೆಯ ತರಳು - ಗುಳಕಮಲೆ ನಡುವಿನ ವಿಜಯಲಕ್ಷ್ಮಿ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ

ಊದು ಕಡ್ಡಿ, ಅಗರ ಬತ್ತಿ ಕಚ್ಚಾವಸ್ತುಗಳಿದ್ದ ಕಾರ್ಖಾನೆಗೆ ಹೇಗೆ ಬೆಂಕಿ ಹೊತ್ತಿಕೊಂಡಿದೆ ಎನ್ನುವುದರ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ಕಾರ್ಖಾನೆಯಲ್ಲಿ ಸಾವಿರಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲರೂ ಕಾರ್ಖಾನೆಯಿಂದ ಹೊರಗೆ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಗ್ಗಲೀಪುರ ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದು, ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.