ETV Bharat / state

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ದುರಂತ.. ಅವಘಡಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ: ಡಿಜಿ ಕಮಲ್ ಪಂತ್ - ಸ್ಥಳೀಯ ಶಾಸಕ ಶಿವಣ್ಣ

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಡಿಜಿಪಿ ಕಮಲ್ ಪಂತ್ ಹೇಳಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Oct 7, 2023, 10:52 PM IST

Updated : Oct 7, 2023, 10:57 PM IST

ಆನೇಕಲ್(ಬೆಂಗಳೂರು) : ಅತ್ತಿಬೆಲೆ ಠಾಣಾ ವ್ಯಾಪ್ತಿಯ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ನಡೆದ ಸ್ಥಳಕ್ಕೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಡಿಜಿಪಿ ಕಮಲ್ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವಘಡದ ಕುರಿತು ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ''ಪಟಾಕಿ ಶೇಖರಣೆ ಮಾಡುವಾಗ ಈ ಅವಘಡ ಸಂಭವಿಸಿದೆ. ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಸದ್ಯ ಬಹುತೇಕ ಬೆಂಕಿ ನಂದಿಸಲಾಗಿದೆ. ಒಳಗಡೆ ಇನ್ನೂ ಸ್ವಲ್ಪ ಬೆಂಕಿಯಿದ್ದು ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದರು.

ಅಗ್ನಿ ಅವಘಡದಲ್ಲಿ 12 ಮಂದಿ ಸಾವು : ''ದುರಂತದಲ್ಲಿ ಇಲ್ಲಿಯವರೆಗೆ 12 ಜನರ ಮೃತದೇಹಗಳು ದೊರೆತಿವೆ. ಆರು ಜನರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಪಟಾಕಿ ಉದ್ಯಮ ನಡೆಸುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಘಟನೆ ಹೇಗೆ ನಡೆದಿದೆ ಎಂಬ ಬಗ್ಗೆ ನಾವು ಮತ್ತು ಜಿಲ್ಲಾ ಪೊಲೀಸರು ತನಿಖೆ ಮಾಡುತ್ತೇವೆ. ಮೇಲ್ನೋಟಕ್ಕೆ ಸ್ಥಳದಲ್ಲಿ ಸುರಕ್ಷತಾ ಕ್ರಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಒಳಗಡೆ ಯಾವ ರೀತಿ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಅವಘಡಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ'' ಎಂದು ತಿಳಿಸಿದರು.

ಮತ್ತೊಂದೆಡೆ ಸ್ಥಳೀಯ ಶಾಸಕ ಶಿವಣ್ಣ ಕೂಡಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, '' ಇದೊಂದು ದುರಂತ. ಇಪ್ಪತ್ತು ಜನರು ಗೋದಾಮಿನಲ್ಲಿದ್ದರು. ಒಟ್ಟು 12 ಮಂದಿ ಸಾವಿಗೀಡಾಗಿದ್ದಾರೆ. ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಆದಮೇಲೆ ಘಟನೆಗೆ ಕಾರಣ, ಯಾರ ನಿರ್ಲಕ್ಷ್ಯ ಎಂಬ ಬಗ್ಗೆ ತಿಳಿದುಬರಲಿದೆ. ಪಟಾಕಿ ಲೋಡ್ ಬಂದಿದೆ. ಆ ವೇಳೆ ಕ್ಯಾಂಟರ್ ಡ್ರೈವರ್ ಏನೋ ಸಿಗರೇಟ್ ಸೇದಿದ್ದಾನೆ. ಅದರಿಂದ ಘಟನೆ ನಡೆದಿರಬಹುದು ಎನ್ನುವ ಮಾಹಿತಿ ಸಹ ಇದೆ. ಆದರೆ ಅದು ಖಚಿತವಾಗಿಲ್ಲ. ಅದರ ಬಗ್ಗೆ ಸಹ ತನಿಖೆ ನಡೆಸಲಾಗುತ್ತಿದೆ‌. ಗೋದಾಮಿನಲ್ಲಿ ಎಷ್ಟು ಪಟಾಕಿ ಸಂಗ್ರಹಿಸಲು ಅನುಮತಿಯಿತ್ತು, ಎಷ್ಟು ಲೋಡ್ ಮಾಡಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದು ಹೇಳಿದರು.

ಇದನ್ನೂ ಓದಿ : ಅತ್ತಿಬೆಲೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ 12ಕ್ಕೆ ಏರಿಕೆ

Last Updated : Oct 7, 2023, 10:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.