ETV Bharat / state

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಅವಘಡ: ಕಣ್ಣಿನ ಆಸ್ಪತ್ರೆಗಳಲ್ಲಿ 43 ಜನರಿಗೆ ಚಿಕಿತ್ಸೆ

author img

By ETV Bharat Karnataka Team

Published : Nov 14, 2023, 2:25 PM IST

ದೀಪಾವಳಿ ಹಬ್ಬದ ಎರಡನೇ ದಿನಕ್ಕೆ ಒಟ್ಟು 43 ಪಟಾಕಿ ಅವಘಡ ಸಂಭವಿಸಿವೆ ಎಂದು ಡಾ. ನಾಗರಾಜು ತಿಳಿಸಿದ್ದಾರೆ.

ಮಿಂಟೋ ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜು
ಮಿಂಟೋ ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜು
ಮಿಂಟೋ ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜು ಹೇಳಿಕೆ

ಬೆಂಗಳೂರು : ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದ್ದರೂ ಹಬ್ಬ ಪ್ರಾರಂಭವಾದಾಗಿನಿಂದ 43 ಪಟಾಕಿ ಅವಘಡ ಪ್ರಕರಣಗಳು ನಗರದ ಎರಡು ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ದಾಖಲಾಗಿವೆ. ಸೋಮವಾರ ಸುಮಾರು 25 ಜನರಿಗೆ ಪಟಾಕಿ ಸಂಬಂಧಿತ ಕಣ್ಣಿನ ಗಾಯಗಳಾಗಿವೆ ಎಂದು ಮಿಂಟೋ ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ.

ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿಯಿಂದ ಇಲ್ಲಿಯವರೆಗೆ 17 ಜನರು ಪಟಾಕಿ ಸಂಬಂಧಿತ ಗಾಯಗಳ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಹಬ್ಬದ ಎರಡನೇ ದಿನ 13 ಪ್ರಕರಣಗಳು ವರದಿಯಾಗಿದೆ. ಮೂವರಿಗೆ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ ದಾಖಲಾದ ಇವರಲ್ಲಿ 10 ಜನರು 18ವರ್ಷದೊಳಗಿನ ಮಕ್ಕಳಾಗಿದ್ದಾರೆ.

ನವೆಂಬರ್ 12 ರಿಂದ ಇಲ್ಲಿಯವರೆಗೆ ನಾರಾಯಣ ನೇತ್ರಾಲಯದಲ್ಲಿ ಕಾಣಿಸಿಕೊಂಡ ಪಟಾಕಿ ಅಪಘಾತಕ್ಕೆ ಒಳಗಾದ ರೋಗಿಗಳು 26 ಆಗಿದ್ದು, ಅವರಲ್ಲಿ 13 ಮಂದಿ ಚಿಕ್ಕ ವಯಸ್ಸಿನವರಾಗಿದ್ದಾರೆ. ಎಲ್ಲಾ ರೋಗಿಗಳಿಗೆ ಆರೈಕೆ ಮತ್ತು ಮೌಖಿಕ ಔಷಧಿಗಳ ರೂಪದಲ್ಲಿ ನಿರ್ವಹಣೆಯ ಅಗತ್ಯವಿತ್ತು. ಇಲ್ಲಿಯವರೆಗೆ ನೋಡಿದ ಯಾವುದೇ ರೋಗಿಗಳಿಗೆ ಯಾವುದೇ ಶಸ್ತ್ರಚಿಕಿತ್ಸೆ ಅಗತ್ಯವಿರಲಿಲ್ಲ. ಈ ಪೈಕಿ 5 ರೋಗಿಗಳಿಗೆ ಗಂಭೀರ ಗಾಯಗಳಾಗಿವೆ.

ಇವರಲ್ಲಿ ಪಟಾಕಿನ ಹೊಡೆಯುವ ವೇಳೆ 12 ರೋಗಿಗಳು ನೋಡುಗರು ಅಥವಾ ಪಕ್ಕದಲ್ಲಿದ್ದವರಾಗಿದ್ದಾರೆ ಮತ್ತು ಉಳಿದವರೆಲ್ಲರೂ ಸ್ವತಃ ಪಟಾಕಿ ಸಿಡಿಸುತ್ತಿದ್ದಾಗ ಅವಘಡ ನಡೆದಿದೆ. ಹೆಚ್ಚಿನ ರೋಗಿಗಳು ಬೆಂಗಳೂರಿನ ನಿವಾಸಿಗಳಾಗಿದ್ದರೆ, ಒಬ್ಬರು ಬಿಹಾರದಿಂದ ಬಂದಿದ್ದವರಾಗಿದ್ದಾರೆ ಎಂದು ಡಾ. ನಾಗರಾಜು ತಿಳಿಸಿದರು.

ಪಟಾಕಿ ಸಿಡಿದಾಗ ಜಾಗ್ರತ ಅಗತ್ಯ : ಕಣ್ಣಿಗೆ ಗಾಯವಾದಾಗ ಕಣ್ಣುಗಳನ್ನು ಉಜ್ಜಿಕೊಳ್ಳಬೇಡಿ. ಪಟಾಕಿಯ ದೊಡ್ಡ ಕಣವೇನಾದರೂ ಒಳಗೆ ಸಿಕ್ಕಿಹಾಕಿಕೊಂಡಿದ್ದರೆ ಬಲವಂತವಾಗಿ ಎಳೆದು ತೆಗೆಯಲು ಪ್ರಯತ್ನಿಸಬೇಡಿ. ಕಣ್ಣುಗಳನ್ನು ಮುಚ್ಚಿಸಿ ಕೂಡಲೇ ವೈದ್ಯರ ಬಳಿಗೆ ಕರೆದುಕೊಂಡು ಹೋಗಿ. ಗಾಯದ ಜಾಗವನ್ನು ಸ್ವಚ್ಛಗೊಳಿಸಿ ನೀರಿನಲ್ಲಿ ಅದ್ದಿಸಿ. ಆದರೆ ಐಸ್ ನೀರು ಬಳಸಬೇಡಿ, ಗಾಯದ ಸ್ಥಳ ಒಣಗಲು ಬಿಡಿ. ಶುದ್ಧವಾದ ಬಟ್ಟೆಯಿಂದ ಗಾಯವನ್ನು ಮುಚ್ಚಬೇಕು.

ಮುನ್ನೆಚ್ಚರಿಕೆ ವಹಿಸಿ: ಪಟಾಕಿ ಸಿಡಿಸುವಾಗ ಉದ್ದನೆಯ ಕಡ್ಡಿ ಬಳಸಿ. ಪಟಾಕಿ ಬಾಕ್ಸ್‌ ಮೇಲೆ ಇರುವ ಎಚ್ಚರಿಕೆಗಳನ್ನು ಓದಿಕೊಳ್ಳಿ. ಮಕ್ಕಳು ಪಟಾಕಿ ಹಚ್ಚುವಾಗ ದೊಡ್ಡವರು ಮಾರ್ಗದರ್ಶನ ಮಾಡಬೇಕು. ಪಕ್ಕದಲ್ಲಿ ಒಂದು ಬಕೆಟ್ ನೀರನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಸಿಂಥೆಟಿಕ್ ಅಥವಾ ಬೇಗನೆ ಸುಡುವ ಸಡಿಲ ಬಟ್ಟೆ ಧರಿಸಿ ಪಟಾಕಿಗಳನ್ನು ಹಚ್ಚಬೇಡಿ. ಕಾಟನ್ ಬಟ್ಟೆ ಬಳಸಿ. ಅರೆಬರೆ ಸುಟ್ಟ ಪಟಾಕಿಯನ್ನು ಕೈಯಲ್ಲಾಗಲಿ, ಕಾಲಲ್ಲಾಗಲಿ ನಂದಿಸುವ ಪ್ರಯತ್ನ ಮಾಡಬಾರದು. ಜನದಟ್ಟಣೆಯ ಪ್ರದೇಶ, ಪಟಾಕಿ ಅಂಗಡಿಗಳ ಮುಂದೆ, ಆಸ್ಪತ್ರೆಗಳ ಬಳಿ, ವೃದ್ಧಾಶ್ರಮಗಳು ಹಾಗೂ ಪೆಟ್ರೋಲ್ ಬಂಕ್ ಬಳಿ ಪಟಾಕಿ ಸುಡಬಾರದು.

ಇದನ್ನೂ ಓದಿ : ಇರಲಿ ಎಚ್ಚರ; ಪಟಾಕಿಯಿಂದ ಗಾಯವಾದಾಗ ಏನು ಮಾಡಬೇಕು..? ಇಲ್ಲಿದೆ ಮಾಹಿತಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.