ETV Bharat / state

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ಮೊದಲ ಪ್ರಕರಣ ದಾಖಲು: ಸಚಿವ ಪ್ರಭು ಚವ್ಹಾಣ್ - Minister Prabhu Chavan

ಕೂಡಗಿ ಗ್ರಾಮದ ಬಳಿಯ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್​​​ವೊಂದರಲ್ಲಿ ವ್ಯಕ್ತಿಯೊಬ್ಬ ಎತ್ತೊಂದನ್ನು ವಧೆ ಮಾಡಿ ಮಾಂಸ ಮಾರಾಟದಲ್ಲಿ ತೊಡಗಿದ್ದ. ಈ ವೇಳೆ ಕೂಡಗಿ ಪಿಎಸ್ಐ ರೇಣುಕಾ ಜಕನೂರು ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯವನ್ನು ಸಚಿವ ಪ್ರಭು ಚವ್ಹಾಣ್ ಶ್ಲಾಘಿಸಿದ್ದಾರೆ.

Minister Prabhu Chavan
ಸಚಿವ ಪ್ರಭು ಚವ್ಹಾಣ್
author img

By

Published : Jan 22, 2021, 7:20 PM IST

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋವನ್ನು ಹತ್ಯೆ ಮಾಡಿ, ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಕೂಡಗಿ ಗ್ರಾಮದ ಬಳಿಯ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್​​​ವೊಂದರಲ್ಲಿ ವ್ಯಕ್ತಿಯೊಬ್ಬ ಎತ್ತೊಂದನ್ನು ವಧೆ ಮಾಡಿ ಮಾಂಸ ಮಾರಾಟದಲ್ಲಿ ತೊಡಗಿದ್ದ. ಈ ವೇಳೆ ಕೂಡಗಿ ಪಿಎಸ್ಐ ರೇಣುಕಾ ಜಕನೂರು ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯವನ್ನು ಸಚಿವರು ಶ್ಲಾಘಿಸಿದ್ದಾರೆ.

ಓದಿ:ಟೆಕ್ಕಿಗಳನ್ನೇ ಟಾರ್ಗೆಟ್ ಮಾಡಿ ಕೋಟಿ ಕೋಟಿ ವಂಚಿಸುತ್ತಿದ್ದ ಇಬ್ಬರ ಬಂಧನ

ಸಿಖಂದರ್ಸಾಬ್ ರಾಜಾಸಾಬ್ ಬೇಪಾರಿ (35) ಬಂಧಿತ ಆರೋಪಿ.‌ ಒಂದು ಎತ್ತನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಮಾಹಿತಿ ಮೆರೆಗೆ ಕೂಡಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಅಲ್ಲೇ ಇದ್ದ ಇನ್ನೊಂದು ಎತ್ತನ್ನು ರಕ್ಷಿಸಿ ಯಲಗೂರು ಗೋಶಾಲೆಗೆ ನೀಡಿದ್ದಾರೆ. ಈ ಸಂಬಂಧ ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಮೊದಲ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರ ಸಮಯ ಪ್ರಜ್ಞೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಿಂದ ಒಂದು ಎತ್ತು ರಕ್ಷಣೆ ಆಗಿರುವುದು ಸಂತಸ ತಂದಿದೆ ಎಂದರು.

ಸಾರ್ವಜನಿಕರಲ್ಲಿ ಮನವಿ:

ಗೋವುಗಳ ಅಕ್ರಮ ಸಾಗಣೆ ಮತ್ತು ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುವುದು ಗಮನಕ್ಕೆ ಬಂದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ, ಗೋವುಗಳ ರಕ್ಷಣೆಗೆ ಮುಂದಾಗಿ. ನಿಮ್ಮ ಸಮಯಪ್ರಜ್ಞೆಯಿಂದ ಮೂಕ ಪ್ರಾಣಿಯ ಜೀವ ಉಳಿಯುತ್ತದೆ. ಕಾನೂನನ್ನು ಕೈಗೆತ್ತಿಕೊಳ್ಳದೆ ಆರಕ್ಷರ ಸಹಾಯದಿಂದ ರಕ್ಷಣೆಗೆ ಮುಂದಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.