ETV Bharat / state

ಬಿಜೆಪಿ ಅವಧಿಯ ಹಗರಣದ ತನಿಖೆಗೆ ಮುಂದಾದ ಕಾಂಗ್ರೆಸ್‌: ಗಂಗಾ ಕಲ್ಯಾಣ ಯೋಜನೆ ಅಕ್ರಮದ ವಿರುದ್ಧ ಮೊದಲ ಎಫ್ಐಆರ್ - ಈಟಿವಿ ಭಾರತ್ ಕನ್ನಡ ಸುದ್ದಿ

ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್​ ಮುಂದಾಗಿದೆ.

ಗಂಗಾ ಕಲ್ಯಾಣ ಯೋಜನೆ
ಗಂಗಾ ಕಲ್ಯಾಣ ಯೋಜನೆ
author img

By

Published : May 24, 2023, 4:07 PM IST

Updated : May 24, 2023, 4:14 PM IST

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರುತ್ತಿದ್ದಂತೆ ಬಿಜೆಪಿಯ ಅವಧಿಯಲ್ಲಿ ನಡೆದಿದ್ದ ಅಕ್ರಮದ ತನಿಖೆ ಆರಂಭವಾಗಿದೆ. ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿದ್ದ ಅಕ್ರಮದ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೃಷಿ ಭೂಮಿಗೆ ನೀರು ಒದಗಿಸುವುದು ಉದ್ದೇಶವಾಗಿತ್ತು: ಗ್ರಾಮೀಣ ಪ್ರದೇಶದಲ್ಲಿ ಸೂಕ್ತ ನೀರಾವರಿ ವ್ಯವಸ್ಥೆ ಇಲ್ಲದ ಪ್ರದೇಶಗಳಲ್ಲಿ ಕೊಳವೆ ಬಾವಿ ಮೂಲಕ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಸರ್ಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಯಡಿ ಫಲಾನುಭವಿಗಳು ಕೃಷಿ ಭೂಮಿಯಲ್ಲಿ ತಜ್ಞರ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸುವುದು ಯೋಜನೆಯ ಉದ್ದೇಶವಾಗಿತ್ತು. ಯೋಜನೆಯು ಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು.

ಗಂಗಾ‌ಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಮುಂದಾಗಿದೆ: ಆದರೆ, ಯೋಜನೆಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ 2021ರಲ್ಲಿ ಗಂಗಾಕಲ್ಯಾಣ ಯೋಜನೆ ಅಕ್ರಮ ತಡೆಯಲು ರಚನೆಯಾಗಿದ್ದ ಸದನ ಸಮಿತಿ ತನ್ನ ಮಧ್ಯಂತರ ವರದಿಯನ್ನೂ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಗಂಗಾ‌ಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಮುಂದಾಗಿದೆ.

ಸದ್ಯ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣವನ್ನ ಶೀಘ್ರವೇ ಸಿಐಡಿಗೆ ವರ್ಗಾಯಿಸುವ ಸಾಧ್ಯತೆಯಿದೆ.

ಗಂಗಾ ಕಲ್ಯಾಣ ಯೋಜನೆ ಬಗ್ಗೆ ಮಾಹಿತಿ : ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಬೋರ್‌ವೆಲ್ ಮತ್ತು ತೆರೆದ ಬಾವಿಗಳನ್ನು ತೋಡಿಸುವುದು. ನಂತರ ಅವುಗಳಿಗೆ ಪಂಪ್ ಸೆಟ್‌ಗಳು ಮತ್ತು ಇತರ ಸಾಮಗ್ರಿಗಳನ್ನು ಅಳವಡಿಸಲಾಗುತ್ತದೆ. ಅಂತರ್ಜಲ ಕುಸಿದಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದು ಘಟಕಕ್ಕೆ 4.50 ಲಕ್ಷ ರೂಪಾಯಿ ನಿಗದಿಪಡಿಸಲಾಗಿತ್ತು.

ಐವತ್ತು ಸಾವಿರ ರೂಪಾಯಿ ಹಣ ಮರುಪಾವತಿ : ಅದರಂತೆಯೇ ಇತರ ಜಿಲ್ಲೆಗಳಲ್ಲಿ ಒಂದು ಘಟಕಕ್ಕೆ ಮೂರುವರೆ ಲಕ್ಷ ರೂಪಾಯಿ ನೀಡುವ ತೀರ್ಮಾನ ಮಾಡಲಾಗಿತ್ತು. ಈ ಪೈಕಿ ಒಂದು ಘಟಕದ ವೆಚ್ಚದ ಐವತ್ತು ಸಾವಿರ ರೂಪಾಯಿಗಳಲ್ಲಿ ಪಂಪ್ ಸೆಟ್‌ಗಳು ಮತ್ತು ಇತರ ಸಾಮಗ್ರಿಗಳ ವೆಚ್ಚವೂ ಸೇರಿರುತ್ತದೆ.

ರೈತರಿಗೆ ನೀಡುವ ಈ ಹಣದಲ್ಲಿ ವಾರ್ಷಿಕ ಶೇ. 6ರ ಬಡ್ಡಿದರದಂತೆ ಸುಮಾರು ಐವತ್ತು ಸಾವಿರ ರೂಪಾಯಿ ಹಣ ಮರುಪಾವತಿ ಮಾಡಬೇಕಾಗುತ್ತದೆ. ಅಂದರೆ ಅಂತರ್ಜಲ ಕುಸಿದ ಜಿಲ್ಲೆಗಳಲ್ಲಿ ಮಾತ್ರ ಮೂರುವರೇ ಲಕ್ಷ ರೂಗಳನ್ನ ಹಾಗೂ ಇತರ ಜಿಲ್ಲೆಗಳಲ್ಲಿ ಎರಡೂವರೆ ಲಕ್ಷ ರೂ. ಗಳನ್ನ ಸರ್ಕಾರವು ಸಬ್ಸಿಡಿಯಾಗಿ ನೀಡುತ್ತದೆ.

ಇದನ್ನೂ ಓದಿ: ಅರ್ಹ ಫಲಾನುಭವಿಗಳಿಗೆ ಐದು ಗ್ಯಾರಂಟಿಗಳ ಲಾಭ ತಲುಪಿಸಲು ಶಾಸಕರಿಗೆ ಸೂಚನೆ: ಡಿಕೆಶಿ

Last Updated : May 24, 2023, 4:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.