ETV Bharat / state

ಹಳೇ‌ ಮೈಸೂರು ಸೇರಿದಂತೆ ಪಕ್ಷ ದುರ್ಬಲವಿರುವ ಭಾಗದಲ್ಲಿ ಪಕ್ಷ ಸಂಘಟನೆಗೆ ನಿಗಾ ವಹಿಸಿ: ಜೆ.ಪಿ‌.ನಡ್ಡಾ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಪಕ್ಷದಲ್ಲಿ ಹಿರಿಯರು ಮತ್ತು ಕಿರಿಯರನ್ನು ಸೇರಿಸಿ ನೂತನ ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಸಮಾಜದ ಪ್ರತಿವರ್ಗದವರು, ಎಲ್ಲಾ ವಯೋಮಾನದವರು ಪ್ರತಿನಿಧಿಸಬೇಕು ಎಂಬುದು ಪಕ್ಷದ ಪ್ರಮುಖ ಉದ್ದೇಶವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದರು.

JP Nadda
ಜೆ.ಪಿ‌.ನಡ್ಡಾ ವಿಡಿಯೋ ಸಂವಾದ
author img

By

Published : Aug 8, 2020, 11:56 PM IST

ಬೆಂಗಳೂರು: ಹಳೇ ಮೈಸೂರು ಭಾಗ ಸೇರಿದಂತೆ ರಾಜ್ಯದಲ್ಲಿ ದುರ್ಬಲ ಇರುವ ಭಾಗದಲ್ಲಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದ್ದಾರೆ.

ಶನಿವಾರ ವಿಡಿಯೋ ಸಂವಾದದ ಮೂಲಕ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಮೊದಲ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಬೇಕು. ಅಲ್ಲದೇ, ರಾಜ್ಯದ ಹಲವು ಭಾಗದಲ್ಲಿ ದುರ್ಬಲ ಇದ್ದು, ಅಲ್ಲಿ ಯಾವ ರೀತಿಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಬೇಕು ಎಂಬುದರ ಬಗ್ಗೆ ಗಮನಹರಿಸಬೇಕು. ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷರು ಹೊಸ ಜವಾಬ್ದಾರಿಗಳನ್ನು ನೀಡಬೇಕು. ಪದಾಧಿಕಾರಿಗಳ ಜತೆ ಸಚಿವರು ಸಹ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಸಂಘಟನಾತ್ಮಕ ದೃಷ್ಟಿಯಿಂದ ಇಡೀ ವರ್ಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಯಾವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂಬುದರ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಚಿಂತನೆ ನಡೆಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪಕ್ಷವು ಯಾವ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಬೇಕು. ಸರ್ಕಾರಗಳ ಯೋಜನೆಗಳು ಜನರಿಗೆ ತಲುಪಿದೆಯೇ? ಅಥವಾ ಇಲ್ಲವೇ? ಎಂಬುದರ ಬಗ್ಗೆಯೂ ಕಾರ್ಯಕರ್ತರು ತಿಳಿದುಕೊಳ್ಳಬೇಕು. ಒಂದು ವೇಳೆ ಜನರಿಗೆ ತಲುಪಿರದಿದ್ದರೆ ಪ್ರಮುಖ ನಾಯಕರ ಗಮನಕ್ಕೆ ತಂದು ಯೋಜನೆಗಳು ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮಂಡಲ ಸಮಿತಿಗಳು ಅಪೂರ್ಣವಾಗಿದ್ದರೆ ತಕ್ಷಣವೇ ಪೂರ್ಣಗೊಳಿಸಬೇಕು. ಬೂತ್‌ಮಟ್ಟದಲ್ಲಿ ವಾಟ್ಸ್‌ಆಪ್ ಗ್ರೂಪ್‌ಗಳನ್ನು ರಚನೆ ಮಾಡಬೇಕು. ಕೇಂದ್ರ ಮತ್ತು ಸರ್ಕಾರಗಳ ಸಾಧನೆಗಳ ಕ್ಲಿಪಿಂಗ್‌ಗಳನ್ನು ಗ್ರೂಪ್‌ಗಳಲ್ಲಿ ಹಾಕಿ ಜನರಿಗೆ ತಲುಪುವಂತೆ ಮಾಡಬೇಕು. ಅಲ್ಲದೆ, ಪಕ್ಷದ ಐಟಿ ವಿಭಾಗವನ್ನು ಅಭಿವೃದ್ಧಿಗೊಳಿಸಬೇಕು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಐಟಿ ವಿಭಾಗವನ್ನು ಸದೃಢಗೊಳಿಸಬೇಕು. ಆತ್ಮನಿರ್ಭರ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ‘ಲೋಕಲ್ ಫಾರ್ ಲೋಕಲ್’ ಪರಿಕಲ್ಪನೆಯನ್ನು ಯಾವ ರೀತಿಯಲ್ಲಿ ಪ್ರಸಿದ್ಧಗೊಳಿಸಬೇಕು ಎಂಬುದರ ಬಗ್ಗೆ ಅವಲೋಕನ ಮಾಡುವತ್ತ ಗಮನಹರಿಸಬೇಕು. ಬೂತ್ ಮಟ್ಟ, ತಾಲೂಕು, ಜಿಲ್ಲಾ ಮಟ್ಟದಲ್ಲಿ ತರಬೇತಿ ಶಿಬಿರಗಳನ್ನು ವಿಡಿಯೋ ಸಂವಾದ ಮೂಲಕ ನಡೆಸಬೇಕು ಎಂದು ತಿಳಿಸಿದರು.

ಪಕ್ಷದಲ್ಲಿ ಹಿರಿಯರು ಮತ್ತು ಕಿರಿಯರನ್ನು ಸೇರಿಸಿ ನೂತನ ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಸಮಾಜದ ಪ್ರತಿವರ್ಗದವರು, ಎಲ್ಲಾ ವಯೋಮಾನದವರು ಪ್ರತಿನಿಧಿಸಬೇಕು ಎಂಬುದು ಪಕ್ಷದ ಪ್ರಮುಖ ಉದ್ದೇಶವಾಗಿದೆ. ಹಿರಿಯರ ಅನುಭವಗಳು ಕಿರಿಯರಿಗೆ ಸಲಹೆಗಳನ್ನು ನೀಡಿ ಪಕ್ಷವನ್ನು ಸಂಘಟಿಸಲು ಉತ್ತೇಜಿಸಬೇಕು. ಕಿರಿಯರು ಹಿರಿಯರ ಅನುಭವವನ್ನು ಕೇಳಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೋವಿಡ್ ವೇಳೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಅತ್ಯುತ್ತಮವಾಗಿ ನಿರ್ವಹಣೆ ಮಾಡಿದೆ. ಜನರಿಗೆ ತೊಂದರೆಯಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಸಹ ಜನರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದು, ಆಶ್ರಯ ಕಲ್ಪಿಸುವುದು ಸೇರಿದಂತೆ ಹಲವು ರೀತಿಯ ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ನಿರ್ಮಲ್‌ಕುಮಾರ್ ಸುರಾನಾ, ಪ್ರಧಾನ ಕಾರ್ಯದರ್ಶಿ ಮಹೇಶಿ ಟೆಂಗಿನಕಾಯಿ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.