ಬೆಂಗಳೂರು: ದಕ್ಷಿಣಕನ್ನಡ ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ನಗರದ ಸಂತ ಅಲೋಶಿಯಸ್ ಪ್ರೌಢ ಶಾಲೆಯಲ್ಲಿ ಮತ ಚಲಾಯಿಸಿದರು. ಬೆಳಗ್ಗೆ 8 ಗಂಟೆ ಸುಮಾರಿಗೆ ಮತಗಟ್ಟೆಗೆ ಬಂದ ನಳಿನ್ ಕುಮಾರ್ ಅವರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ನಗರದ ಲೇಡಿ ಹಿಲ್ ಸಮೀಪದ ಗಾಂಧಿನಗರ ಸ.ಹಿ.ಪ್ರಾ. ಶಾಲೆಯಲ್ಲಿ ತಮ್ಮ ಪತ್ನಿಯೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.
ಉಡುಪಿ ಕೋಟತಟ್ಟು ಪಂಚಾಯತ್ ಮತಗಟ್ಟೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮತದಾನ ಮಾಡಿದ್ದಾರೆ. ಕೋಟತಟ್ಟು ಪಂಚಾಯತ್ನ 165ನೇ ಮತಗಟ್ಟೆಗೆ ಆಗಮಿಸಿದ ಅವರು ಸುಮಾರು 45 ನಿಮಿಷ ಮತಗಟ್ಟೆಯ ಹೊರಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ರು.
ಇತ್ತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮತದಾನ ಮಾಡಲು ಬಂದ 94 ವರ್ಷದ ವೃದ್ಧೆಯನ್ನ ವ್ಹೀಲ್ ಚೇರ್ನಲ್ಲಿ ಕರೆತದಂದ ಶಾಸಕ ಎಂ.ಪಿ.ಕುಮಾರಸ್ವಾಮಿ ವೃದ್ಧೆಗೆ ನೆರವಾಗಿದ್ದಾರೆ. ಇನ್ನು ನಗರದ ವಿಶ್ವವಿದ್ಯಾಲಯ ಶಾಲೆಗೆಯಲ್ಲಿ ಎಂಎಲ್ಸಿ ಎಸ್.ಎಲ್.ಬೋಜೇಗೌಡ ಮತದಾನ ಮಾಡಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಬಾಸಾಪುರದಲ್ಲಿ ಕುಟುಂಬ ಸಮೇತವಾಗಿ ಅಗಮಿಸಿ ಮತಗಟ್ಟೆ ಸಂಖ್ಯೆ 192ರಲ್ಲಿ ಮತದಾನ ಮಾಡಿದ್ದಾರೆ.
ಚಿಕ್ಕಮಗಳೂರಿನ ಬಸವನಹಳ್ಳಿ ಶಾಲೆಯಲ್ಲಿ ಶಾಸಕ ಸಿ.ಟಿ.ರವಿ ಮತದಾನ ಮಾಡಿದ್ದಾರೆ. ಪತ್ನಿ ಪಲ್ಲವಿ ಮತ್ತು ಕಾರ್ಯಕರ್ತರೊಂದಿಗೆ ಮತಗಟ್ಟೆಗೆ ಅಗಮಿಸಿದ ಅವರು, ಸರತಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಉಡುಪಿಯ ಮಲ್ಪೆಯಲ್ಲಿರುವ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಬಂದು ಹಕ್ಕು ಚಲಾಯಿಸಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಯಾದವ ಮಠದ ಬಸವ ಯಾದವನಂದ ಸ್ವಾಮೀಜಿಯವರೊಂದಿಗೆ ನಗರದ ಬರಗೇರಮ್ಮ ಶಾಲೆಯ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದ್ದಾರೆ. ಇದಕ್ಕೂ ಮೊದಲು ನಗರದ ಗಣೇಶ, ಸಾಯಿಬಾಬಾ, ಆಂಜನೇಯಸ್ವಾಮಿ ದೇವಾಲಯಗಳಿಗೆ ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.