ETV Bharat / state

ಜುಲೈ 3 ರಿಂದ 14 ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ - ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದೆ. ಜು.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

First session from 3rd to 14th July
ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಜುಲೈ 3ರಿಂದ 14ರವರೆಗೆ:ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ
author img

By

Published : Jun 9, 2023, 11:01 PM IST

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದೆ. ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: Congress Guarantees: ಗ್ಯಾರಂಟಿ ಯೋಜನೆಗಳ ಷರತ್ತಿನಲ್ಲಿ ಗೊಂದಲ; ಸದನದಲ್ಲಿ ಹೋರಾಟಕ್ಕೆ ಅಣಿಯಾದ ಬಿಜೆಪಿ

ನಂತರ ಜುಲೈ 5 ರಿಂದ 7 ರವರೆಗೆ ಕಲಾಪ ನಡೆಯಲಿದೆ. ಜು.8 ಮತ್ತು 9 ರಂದು ಸರ್ಕಾರಿ ರಜೆ ಇದ್ದು, 10 ರಿಂದ 14 ರವರೆಗೆ ಕಲಾಪ ನಡೆಯಲಿದೆ. ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ಮತ್ತು ಸರ್ಕಾರದ ಮುಂದಾಲೋಚನೆಗಳ ಕುರಿತು, ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರಿಂದ ಓದಿಸಲಾಗುತ್ತದೆ.

ಇದನ್ನೂ ಓದಿ: ಸಂವಿಧಾನ ಬದಲಿಸಲು ಬಂದವರನ್ನೇ ಬದಲಾಯಿಸಿದ್ದೇವೆ, 2024ರ ಲೋಕಸಭೆ ಚುನಾವಣೆಯಲ್ಲೂ ಇದು ಮರುಕಳಿಸಲಿ: ಸಿಎಂ ಸಿದ್ದರಾಮಯ್ಯ

ಜುಲೈ 7 ರಂದು ಬಜೆಟ್ ಮಂಡನೆ: ಜು.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದರು. ಜಂಟಿ ಅಧಿವೇಶನ ಆರಂಭದ ಬಳಿಕ ಮೂರು ದಿನ ರಾಜ್ಯಪಾಲರ ಮೇಲಿನ ಚರ್ಚೆ ನಡೆಯಲಿದ್ದು, ನಂತರ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. 7 ರಂದು ಬಜೆಟ್ ಮಂಡಿಸಿದ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ ವಿಸ್ತರಣೆ

ಇದನ್ನೂ ಓದಿ: ಲೋಕಸಭೆ ಚುನಾವಣೆ: ತುಮಕೂರು ಬಿಜೆಪಿ ಟಿಕೆಟ್​ಗೆ ವಿ.ಸೋಮಣ್ಣ, ಮುದ್ದಹನುಮೇಗೌಡ ನಡುವೆ ಪೈಪೋಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.