ಬೆಂಗಳೂರು: ಉತ್ತುಂಗದ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಂಕಿಗೆ ಇಳಿಕೆ ಕಂಡಿದೆ. ಈ ಪ್ರಮಾಣದ ಇಳಿಕೆ ಕಂಡು ರಾಜ್ಯದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 998 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,84,897ಕ್ಕೆ ಏರಿಕೆ ಆಗಿದೆ. ಕೊರೊನಾಗೆ 13 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,778ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.22ರಷ್ಟು ಹಾಗೂ ಸಾವಿನ ಪ್ರಮಾಣ ಶೇ. 1.30ರಷ್ಟು ಇದೆ.
ಇದನ್ನೂ ಓದಿ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಪೈಕಿ ಶೇ.93.71 ರಷ್ಟು ಗುಣಮುಖ: 443 ಮಂದಿ ಬಲಿ
ಕೊರೊನಾದಿಂದ 2209 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,49,821 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 349 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದು, ರಾಜ್ಯದಲ್ಲಿ ಸದ್ಯ 23,279 ಸಕ್ರಿಯ ಪ್ರಕರಣಗಳು ಇವೆ. ಕಳೆದ 7 ದಿನಗಳಲ್ಲಿ 28,617 ಜನರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 1,17,323, ದ್ವಿತೀಯ ಸಂಪರ್ಕದಲ್ಲಿ 1,30,970 ಜನರಿದ್ದಾರೆ. ವಿಮಾನ ನಿಲ್ದಾಣದಿಂದ 1155 ಪ್ರಯಾಣಿಕರು ಬಂದಿದ್ದು, ಕೋವಿಡ್ ತಪಾಸಣೆಗೊಳಪಟ್ಟಿದ್ದಾರೆ.
ಬೆಂಗಳೂರು ನಗರ:
ಬೆಂಗಳೂರು ನಗರದಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣದಲ್ಲಿ ತೀವ್ರ ಇಳಿಕೆಯಾಗಿದ್ದು, ಇಂದು 444 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. 6 ಮಂದಿ ಮೃತಪಟ್ಟಿದ್ದಾರೆ. 1509 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 369734ಕ್ಕೆ ಏರಿಕೆಯಾಗಿದೆ. ಇಂದು 1509 ಮಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 348348 ಮಂದಿ ಗುಣಮುಖರಾಗಿದ್ದಾರೆ. 17248 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 4137 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. 181 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.