ETV Bharat / state

ಟೋಕಿಯೊ ಒಲಿಂಪಿಕ್ಸ್‌​ನಲ್ಲಿ ಚಿನ್ನದ ಪದಕ ಗೆದ್ದರೆ 5 ಕೋಟಿ ರೂ ಬಹುಮಾನ: ಸಿಎಂ ಬಿಎಸ್‌ವೈ - Winning a gold medal at the Tokyo Olympic Games

ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ರೂ. ಬೆಳ್ಳಿಗೆ 3 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಕೋಟಿ ರೂ. ನೀಡಿ ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.

ಸಿಎಂ ಘೋಷಣೆ
ಸಿಎಂ ಘೋಷಣೆ
author img

By

Published : Jul 14, 2021, 7:09 PM IST

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್‌​ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 5 ಕೋಟಿ ರೂ. ಬೆಳ್ಳಿ ಗೆಲ್ಲುವವರಿಗೆ 3 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಕೋಟಿ ರೂ. ನೀಡಿ ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಪ್ರೋತ್ಸಾಹಧನನ ಚೆಕ್ ವಿತರಿಸಿದರು. ಅದಿತಿ ಅಶೋಕ್, ಪೌವಾದ್ ಮಿರ್ಜಾ ಇವರುಗಳಿಗೆ ಅವರ ಪರವಾಗಿ ಅವರ ಪಾಲಕರಿಗೆ ತಲಾ 10 ಲಕ್ಷ ರೂ. ಚೆಕ್ ಅನ್ನು ಸಿಎಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಹಸ್ತಾಂತರಿಸಿ ಶುಭ ಕೋರಿದರು.

ಚೆಕ್ ವಿತರಣೆ
ಚೆಕ್ ವಿತರಣೆ ಮಾಡಿದ ಸಿಎಂ ಯಡಿಯೂರಪ್ಪ

ಇದೇ ವೇಳೆ ಭಾರತ ತಂಡದ ಜೆರ್ಸಿಯನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ಬಳಿಕ ಒಲಿಂಪಿಕ್ಸ್‌​ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸೆಲ್ಫಿ ಫ್ರೇಮ್​ನಲ್ಲಿ ನಿಂತು ಸಿಎಂ ಹಾಗೂ ಸಚಿವರು ಚಿಯರಪ್ ಮಾಡಿದರು‌.

ನಂತರ ಮಾತನಾಡಿದ ಸಿಎಂ ಯಡಿಯೂರಪ್ಪ, ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಆಯ್ಕೆಯಾಗುತ್ತಿದ್ದಂತೆ ಕರ್ನಾಟಕದ ಹೆಮ್ಮೆಯ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಘೋಷಣೆ ಮಾಡಿದ್ದೆ. ಅದರಂತೆ ಇಂದು ತಲಾ 10 ಲಕ್ಷ ರೂ. ನೀಡಲಾಗುತ್ತಿದೆ. ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಸದಾ ಬೆಂಬಲ ನೀಡಲಿದೆ. ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವುದು ಹೆಮ್ಮೆಯ ವಿಚಾರ. ಅಲ್ಲಿ ಗೆದ್ದು ಬಂದರೆ ರಾಜ್ಯ ಮಾತ್ರವಲ್ಲ ಇಡೀ ದೇಶಕ್ಕೆ ಕೀರ್ತಿ ಬರಲಿದೆ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮಾತನಾಡಿ, ಈಜು ಸ್ಪರ್ಧೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌​ನಲ್ಲಿ ಭಾರತ ತಂಡ ಭಾಗವಹಿಸುತ್ತಿದೆ. ಮೂವರು ಕ್ರೀಡಾಪಟುಗಳು ಆಯ್ಕೆಯಾಗಿದ್ದು, ಅವರಲ್ಲಿ ಓರ್ವ ಕ್ರೀಡಾಪಟು ಕರ್ನಾಟಕದವರು ಎನ್ನುವುದು ನಮಗೆ ಹೆಮ್ಮೆ. ಒಲಿಂಪಿಕ್ಸ್‌​ಗೆ ಆಯ್ಕೆಯಾಗಿರುವ ಮೂವರೂ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದರು.

ಕ್ರೀಡಾಪಟುಗಳ ಸಾಧನೆ ಹಿನ್ನೋಟ:

1. ಅದಿತಿ ಅಶೋಕ್

ಅದಿತಿ ಅಶೋಕ್ ಗಾಲ್ಫ್ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದರು. 2016 ರಲ್ಲಿ ಹೀರೋ ವುಮನ್ ಇಂಡಿಯನ್ ಓಪನ್ ಚಾಂಪಿಯನ್ ಆಗಿದ್ದಾರೆ. 2017 ರಲ್ಲಿ ಪಾತಿಮಾ ಬಿಂಟ್ ಮುಬಾರಕ್ ಲೇಡಿಲ್ ಓಪನ್ ಚಾಂಪಿಯನ್ ಆಗಿದ್ದಾರೆ. ಅಲ್ಲದೆ 2012 ರಲ್ಲಿ ಆಲ್ ಇಂಡಿಯಾ ಜೂನಿಯರ್ ಚಾಂಪಿಯನ್ ಶಿಪ್ ಹಾಗೂ 2014 ರಲ್ಲಿ ಆಲ್ ಇಂಡಿಯಾ ಲೇಡಿಸ್ ಅಂಡ್ ಗರ್ಲ್ ಚಾಂಪಿಯನ್ ಶಿಪ್ ಆಗಿ ಸಾಧನೆ ಮಾಡಿದ್ದಾರೆ.

2. ಶ್ರೀಹರಿ ನಟರಾಜ್

ಖ್ಯಾತ ಈಜುಪಟು ಶ್ರೀಹರಿ ನಟರಾಜ್ 2016 ರಲ್ಲಿ ಸೌತ್ ಏಷಿಯನ್ ಚಾಂಪಿಯನ್ ಶಿಪ್​ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. 2017 ರಲ್ಲಿ ಉಜ್ಬೇಕಿಸ್ಥಾನದಲ್ಲಿ ನಡೆದ 9ನೇ ಏಷಿಯನ್ ಚಾಂಪಿಯನ್ ಶಿಪ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 2018 ರಲ್ಲಿ ಜಕಾರ್ತದಲ್ಲಿ ನಡೆದ ಏಷಿಯನ್ ಗೇಮ್ಸ್​ನಲ್ಲಿ ಪಾಲ್ಗೊಂಡಿದ್ದಾರೆ. 2016 ರಲ್ಲಿ ರಾಂಚಿಯಲ್ಲಿ ಆಯೋಜಿಸಿದ್ದ 70ನೇ ಸೀನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು, 2017 ರಲ್ಲಿ ಇಂದೋರ್‌ನಲ್ಲಿ ನಡೆದ 71 ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್‌ನಲ್ಲಿ ಚಿನ್ನ, ಹಾಗೂ 2018 ರಲ್ಲಿ ಕೇರಳದಲ್ಲಿ ನಡೆದ 72ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್‌ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ.

3. ಫೌವಾದ್ ಮಿರ್ಜಾ

ಈಕ್ವೆಸ್ಟ್ರಿಯನ್ ಪಟು ಫೌವಾದ್ ಮಿರ್ಜಾ 2018ರಲ್ಲಿ ನಡೆದ 18ನೇ ಏಷಿಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.