ETV Bharat / state

ನಗರದಲ್ಲಿ ಇನ್ನೂ ಐದು ಹೊಸ ಸಂಚಾರಿ ಠಾಣೆ: ಸಿಎಂ ಬಸವರಾಜ ಬೊಮ್ಮಾಯಿ

ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲು ನಗರದ 300 ಕಡೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ತಂತ್ರಾಂಶ ಒಳಗೊಂಡ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

CM Basavaraja bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Dec 9, 2022, 10:01 AM IST

Updated : Dec 9, 2022, 12:33 PM IST

ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿರ್ವಹಣೆ ಮತ್ತು ಸಂಚಾರ ನಿಯಮ ಉಲ್ಲಂಘನೆಯಲ್ಲಿ ಪಾರದರ್ಶಕತೆ ತರಲು ಹೆಚ್ಚು ಹೆಚ್ಚು ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಶಿವಾಜಿನಗರ ಬ್ರಾಡ್ ವೇ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪೂರ್ವ ವಿಭಾಗ ಡಿಸಿಪಿಯವರ ಕಚೇರಿಯ ನೂತನ ಕಟ್ಟಡ ಮತ್ತು ಇಂಟಿಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ವಿಭಾಗಕ್ಕೆ ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಳಿಕ ಮಾತನಾಡಿದ ಬೊಮ್ಮಾಯಿ, 'ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಎಂಬುದು ದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿವಾರಿಸಲು ವಿಶೇಷ ಕಮಿಷನರ್ ಆಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೇ, ಬೆಳ್ಳಂದೂರು, ಹೆಣ್ಣೂರು, ಮಹದೇವಪುರ, ತಲಘಟ್ಟಪುರ, ಬ್ಯಾಡರಹಳ್ಳಿಯಲ್ಲಿ ಹೊಸ ಸಂಚಾರ ಠಾಣೆ ತೆರೆಯಲು ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ನಗರದ ಹೊರಭಾಗದಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತದೆ' ಎಂದರು.

ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಚಾಲಕ, ಸವಾರರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಸಂಪೂರ್ಣ ತಂತ್ರಜ್ಞಾನ ಬಳಸಿ ಕಾರ್ಯರೂಪಕ್ಕೆ ತರಲಾಗುತ್ತದೆ. ನಗರದ 300 ಕಡೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ತಂತ್ರಾಂಶ ಒಳಗೊಂಡ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿವೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾವೀನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ

Last Updated : Dec 9, 2022, 12:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.