ಬೆಂಗಳೂರು: ಬಹಳಷ್ಟು ಟೀಕೆ - ಟಿಪ್ಪಣಿ, ವಿಳಂಬದ ನಂತರ ನಡೆದ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಐದು ಜನ ಶಾಸಕರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮಾಜಿ ಸಚಿವರಾಗಿರುವ 12 ಜನ ಶಾಸಕರು ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟ ಹೊಸಬರು ಹಾಗೂ ಹಳಬರ ಸಮ್ಮಿಶ್ರಣವಾಗಿದೆ. ಶಾಸಕರಾದ ಡಾ. ಅಶ್ವಥ್ ನಾರಾಯಣ, ಜೆ.ಸಿ.ಮಾಧುಸ್ವಾಮಿ, ಪ್ರಭು ಚವ್ಹಾಣ್, ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಇದೇ ಮೊದಲ ಬಾರಿಗೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ, ಸ್ಪೀಕರ್, ಸಚಿವರಾಗಿ ಕಾರ್ಯನಿರ್ವಹಿಸಿರುವ ಜಗದೀಶ್ ಶೆಟ್ಟರ್, ಉಪ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇವರ ಜತೆಗೆ ಈ ಹಿಂದೆ ಸಚಿವರಾಗಿ ಕೆಲಸ ಮಾಡಿ ಅನುಭವ ಹೊಂದಿರುವ ಗೋವಿಂದ ಕಾರಜೋಳ, ಲಕ್ಮ್ಮಣ ಸವದಿ, ಶ್ರೀರಾಮುಲು, ವಿ.ಸೋಮಣ್ಣ, ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್, ಹೆಚ್.ನಾಗೇಶ್, ಸುರೇಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಸಿಎಂ ಯಡಿಯೂರಪ್ಪನವರ ಮಂತ್ರಿ ಮಂಡಲದಲ್ಲಿ ಹಳಬರು ಹಾಗೂ ಹೊಸಬರು ಇದ್ದಾರೆ. ಒಬ್ಬ ಮಹಿಳೆಗೂ ಪ್ರಾತಿನಿಧ್ಯ ನೀಡಲಾಗಿದೆ.