ಬೆಂಗಳೂರು: ಚಾಂದಿನಿ ಚೌಕ್ ಬಳಿಯ ಹೋಟೆಲ್ ಸಿಬ್ಬಂದಿಯ ಸಂಪರ್ಕದಿಂದ ಶಿವಾಜಿನಗರದಲ್ಲಿ ನಾಲ್ವರಿಗೆ ಸೋಂಕು ಹರಡಿದ ಕಾರಣ, ಚಾಂದಿನ್ ಚೌಕ್ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸಮೀಪದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮುಂದಿನ ಆದೇಶ ಬರುವವರೆಗೂ ಬಂದ್ ಮಾಡಲಾಗಿರುವ ಪ್ರದೇಶಗಳಲ್ಲಿ ಯಾವುದೇ ಅಂಗಡಿಗಳನ್ನು ತೆರೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಒಂದು ವೇಳೆ ತೆರೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.