ETV Bharat / state

ಕ್ಯಾನ್ಸರ್ ಔಷಧಗಳ ಮೇಲಿನ ಲಾಭದಲ್ಲಿ ಮಾರ್ಜಿನ್ ನಿಗದಿ: ಮೇಲ್ಮನವಿ ಅರ್ಜಿ ವಜಾಗೊಳಿಸಿದ ದ್ವಿಸದಸ್ಯ ಪೀಠ - ETV Bharat kannada News

ಕ್ಯಾನ್ಸರ್ ಚಿಕಿತ್ಸೆಯ ಔಷಧ ದರವನ್ನು ದುಬಾರಿಯಾಗಿ ನಿಗದಿಪಡಿಸಿ ರೋಗಿಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯಕ್ಕೆ ಹೈಕೋರ್ಟ್​ ಬ್ರೇಕ್ ಹಾಕಿದೆ.​

High Court
ಹೈಕೋರ್ಟ್
author img

By

Published : Mar 27, 2023, 10:18 PM IST

ಬೆಂಗಳೂರು : ಕೇಂದ್ರ ಸರ್ಕಾರ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ನೀಡುವ 42 ಔಷಧಗಳ ದರವನ್ನು ನಿಗದಿ ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್​ ವಿಭಾಗೀಯಪೀಠ ರದ್ದುಪಡಿಸಿ ಆದೇಶ ಹೊರಡಿಸಿದೆ. 2022ರ ನ.30ರಂದು ಏಕಸದಸ್ಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಲಿಮಿಟೆಡ್ ಸಲ್ಲಿಸಿದ್ದ ದ್ವಿಸದಸ್ಯ ಪೀಠಕ್ಕೆ ಮೇಲ್ಮವಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ. ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಮೇಲ್ಮನವಿ ಅರ್ಜಿದಾರರ ಪರ ವಾದ ಮಂಡಿಸಿ, ಏಕ ಸದಸ್ಯ ಪೀಠ ನೀಡಿರುವ ಆದೇಶದಿಂದ ಔಷಧ ಕಂಪೆನಿಗಳ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ ಏಕಸದಸ್ಯಪೀಠದ ಆದೇಶವನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿ, ಕ್ಯಾನ್ಸರ್​ ಚಿಕಿತ್ಸೆ ಪಡೆಯಲು ಕಷ್ಟ ಸಾಧ್ಯವಾಗಲಿದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶ ಸರಿಯಾಗಿದೆ. ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ಈ ಸಂದರ್ಭದಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಏಕಸದಸ್ಯಪೀಠ ನೀಡಿರುವ ತೀರ್ಪು ಸರಿ ಇದೆ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣ ಹಿನ್ನೆಲೆ ಏನು? : ಕ್ಯಾನ್ಸರ್ ಚಿಕಿತ್ಸೆಯ ಔಷಧ ದರವನ್ನು ದುಬಾರಿಯಾಗಿ ನಿಗದಿಪಡಿಸಿ ರೋಗಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ಬೆಲೆ ನಿಗದಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯತೆ ಮನಗಂಡು 2019ರಲ್ಲಿ 42 ಕ್ಯಾನ್ಸರ್ ಔಷಧಗಳ ವ್ಯಾಪಾರ ಮಾರ್ಜಿನ್‌ಗೆ ಶೇ.30ರಷ್ಟು ಮಿತಿ ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಮೊದಲು ಏಕಸದಸ್ಯಪೀಠದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿ 2022 ನ.3ರಂದು ಕೇಂದ್ರದ ಆದೇಶ ಎತ್ತಿಹಿಡಿದಿತ್ತು. ಅಲ್ಲದೆ, ಅರ್ಜಿಯನ್ನು ವಜಾಗೊಳಿಸಿತ್ತು.

ಇದಲ್ಲದೆ, ‘‘ಭಾರತದಲ್ಲಿ ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ಭಾರಿ ಹಣವನ್ನು ಖರ್ಚು ಮಾಡಬೇಕಾದಂತಹ ಸ್ಥಿತಿ ಇದ್ದು, ಚಿಕಿತ್ಸೆ ಕೈಗೆಟುಕುವಂತಾಗಬೇಕು. ಕ್ಯಾನ್ಸರ್ ಕಾಯಿಲೆಯನ್ನು ಮುಂಚಿತವಾಗಿ ಚಿಕಿತ್ಸೆ ನೀಡುವುದರಿಂದ ಗುಣಪಡಿಸಬಹುದಾಗಿದೆ. ಅದಕ್ಕೆ ನೀತಿಯೊಂದನ್ನು ರೂಪಿಸದೇ ಇದ್ದರೆ ಬಹುತೇಕ ಮಧ್ಯಮ ವರ್ಗದ ಜನರು ಅಧಿಕ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುವುದಿಲ್ಲ, ಇದು ದುರದೃಷ್ಟಕರ. ಹಾಗಾಗಿ ರಾಷ್ಟ್ರೀಯ ಫಾರ್ಮಸುಟಿಕಲ್ಸ್ ಬೆಲೆ ನಿಗದಿ ನೀತಿ 2012ರಂತೆ ಲಾಭದ ಮೇಲೆ ಮಿತಿ ಹೇರಿರುವುದು ಸರಿಯಾಗಿಯೇ ಇದೆ ಎಂದು ನ್ಯಾಯಪೀಠ ತಿಳಿಸಿತ್ತು.

ಆದರೆ ಏಕಸದಸ್ಯಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿದಾರರ ಸಂಸ್ಥೆ, ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಗೆ 20 ಸಮಗ್ರ ಆರೈಕೆ ಕೇಂದ್ರಗಳನ್ನು ನಡೆಸಲಾಗುತ್ತಿದ್ದು, ಕ್ಯಾನ್ಸರ್ ನಿಗ್ರಹ ಔಷಧಗಳಿಗೆ ಬೆಲೆ ನಿಗದಿ ಮಾಡುವ ಅಧಿಕಾರ ಕೇಂದ್ರ ಸರ್ಕರಕ್ಕೆ ಇಲ್ಲ. ಶೇ.30ರಷ್ಟು ವ್ಯಾಪಾರ ಮಾರ್ಜಿನ್ ನಿಗದಿ ಏಕಪಕ್ಷೀಯ ಮತ್ತು ಅನ್ಯಾಯದ ಹಾಗೂ ಸಂವಿಧಾನದ ಕಲಂ 19(1)(ಜಿ)ಗೆ ವಿರುದ್ಧವಾಗಿದೆ ಎಂದು ವಾದಿಸಿತ್ತು.

ಇದನ್ನೂ ಓದಿ :ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಪ್ರಕರಣದ ವಿಚಾರಣೆ: ಅಧಿಕಾರಿ ವಿರುದ್ಧದ ಪ್ರಕರಣ ರದ್ದು ಮಾಡಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.