ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅಕ್ಷರ ಜಾತ್ರೆ ನಡೆಸಲು ದಿನಾಂಕ ನಿಗದಿಪಡಿಸಿ, ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ 2021 ರ ಫೆಬ್ರವರಿ 26, 27, ಹಾಗೂ 28 ರಂದು ಮೂರು ದಿನಗಳ ಕಾಲ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿದೆ.
ಇದಕ್ಕೂ ಮೊದಲು ಗೃಹ ಸಚಿವರು, ಹಾವೇರಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಹಾವೇರಿ ಶಾಸಕರಾದ ನೆಹರೂ ಓಲೇಕಾರ್ ಜೊತೆಗೂ ಚರ್ಚಿಸಲಾಗಿದೆ.
ಇದೀಗ ಈ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸಲು ಅನುಮತಿ ಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕಸಾಪ ಅಧ್ಯಕ್ಷರಾದ ಡಾ. ಮನು ಬಳಿಗಾರ್ ತಿಳಿಸಿದ್ದಾರೆ.