ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ, ಯಾವುದೇ ಸಂಘಟನೆಗಳಿಗೆ ಅವಕಾಶ ನೀಡದೆ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ನೆರವೇರಿಸಲು ತೀರ್ಮಾನಿಸಿದೆ. ವಿಧಾನಸೌಧದ ಕಚೇರಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಈ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ಸರ್ಕಾರದ ಪರವಾಗಿ ಕಂದಾಯ ಇಲಾಖೆಯ ಸಹಾಯಕ ಆಯುಕ್ತರಿಂದ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರ ಧ್ವಜದ ನೀತಿ ನಿಯಮಗಳಡಿ ಎಲ್ಲರೂ ಭಾಗವಹಿಸಬಹುದು. ಯಾವುದೇ ಸಂಘಟನೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಧ್ವಜಾರೋಹಣ ನಡೆಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಅದು ಈದ್ಗಾ ಮೈದಾನವಲ್ಲ: ಈದ್ಗಾ ಮೈದಾನ ಅಂತಾ ಇನ್ಮುಂದೆ ಇರುವುದಿಲ್ಲ. ಅದು ಗುಟ್ಟಹಳ್ಳಿ, ಚಾಮರಾಜಪೇಟೆ ಕಂದಾಯ ಇಲಾಖೆ ಆಸ್ತಿ ಅಂತಿರಲಿದೆ. ಸದ್ಯ ಕಂದಾಯ ಇಲಾಖೆಗೆ ಆ ಸ್ವತ್ತು ಸೇರಿದೆ. ಹೀಗಾಗಿ ಅದನ್ನು ಮುಂದೆ ಬಿಬಿಎಂಪಿಗೆ ಕೊಡಬೇಕಾ, ಬಿಡಿಎಗೆ ಕೊಡಬೇಕಾ ಅಥವಾ ಕಂದಾಯ ಇಲಾಖೆಯಲ್ಲೇ ಉಳಿಸಿಕೊಳ್ಳಬೇಕೇ ಎಂಬುದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು.
ಇದನ್ನೂ ಓದಿ: ತಣ್ಣಗಾಗದ ಈದ್ಗಾ ಕಿಚ್ಚು: ಮುಸ್ಲಿಂ ಮುಖಂಡರ ಜೊತೆ ಶಾಂತಿ ಸಭೆ ನಡೆಸಿದ ಪೊಲೀಸರು