ETV Bharat / state

ಸಾಲು ಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ - Flat allocation by the BDA for the Salumarada Timmakka

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನದ ನೋಂದಣಿ ಪತ್ರ ನೀಡಿದರು.

Allocation of land to Thimmakka by the BDA
ಸಾಲು ಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ
author img

By

Published : Jun 22, 2022, 10:14 PM IST

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರಿಸಿದರು.

Allocation of land to Thimmakka by the BDA

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್​ನಲ್ಲಿರುವ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ನೀಡಿದರು.

ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಿ: ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.

ಇದನ್ನೂ ಓದಿ: ಮುಂದಿನ ವರ್ಷದಿಂದ ಒಂದೇ ಸಿಇಟಿ: ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಹೆಚ್ಚಳ

ಈ ಸಂದರ್ಭದಲ್ಲಿ ಮಾತನಾಡಿದ ಬಿಡಿಎ ವಿಶ್ವನಾಥ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲುಮರದ ತಿಮ್ಮಕ್ಕರಿಗೆ ನಿವೇಶನ ನೀಡಿರುವುದರಿಂದ ಸಂತೋಷವಾಗಿದೆ ಎಂದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.