ETV Bharat / state

ಸಾಕ್ಷ್ಯಾಧಾರ ಕೊರತೆಯಿಂದ ಅತ್ಯಾಚಾರ ಕೇಸ್​ ರದ್ದು.. ತನಿಖೆಯಲ್ಲಿನ ದೋಷ ಆರೋಪಿಗೆ ಲಾಭ: ಹೈಕೋರ್ಟ್

ಸಾಕ್ಷ್ಯಾಧಾರ ಕೊರತೆಯಿಂದ ಅತ್ಯಾಚಾರ ಆರೋಪಿ ವಿರುದ್ಧದ ಪ್ರಕರಣ ರದ್ದು- ಅಪ್ರಾಪ್ತೆ ಜೊತೆ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದ 45 ವರ್ಷದ ಆರೋಪಿ- ಅಗತ್ಯ ವೈದ್ಯಕೀಯ ಸಾಕ್ಷ್ಯಾಧಾರ ಒದಗಿಸುವಲ್ಲಿ ಪೊಲೀಸರು ವಿಫಲ

High Court
ಹೈಕೋರ್ಟ್​
author img

By

Published : Dec 24, 2022, 7:42 PM IST

ಬೆಂಗಳೂರು: ಅತ್ಯಾಚಾರ ಆರೋಪಗಳಲ್ಲಿ ಒಂದು ವೇಳೆ ಪೊಲೀಸ್ ತನಿಖೆಯಲ್ಲಿ ದೋಷವಿದ್ದಲ್ಲಿ ಅದರ ಲಾಭ ಆರೋಪಿಗಳಿಗೆ ಸಿಗಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸಾಧ್ಯಾ ಸಾಧ್ಯತೆಗಳ ಆಧಾರದಲ್ಲಿ ಆರೋಪಿಗಳನ್ನು ಅಪರಾಧಿ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಅಲ್ಲದೆ, ಅತ್ಯಾಚಾರ ಆರೋಪದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಬಾಲಕಿಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ 45 ವರ್ಷದ ವ್ಯಕ್ತಿಯೊಬ್ಬನ ವಿರುದ್ಧ ದೂರು ದಾಖಲಾಗಿತ್ತು. ಆದರೆ, ಸಂತ್ರಸ್ತೆ ಹೇಳಿಕೆ ಆರೋಪವನ್ನು ಸಾಬೀತು ಪಡಿಸುವಂತಿರಲಿಲ್ಲ. ಜತೆಗೆ, ಯಾವುದೇ ಪ್ರತ್ಯಕ್ಷ ಸಾಕ್ಷಿಗಳು ಇರಲಿಲ್ಲ. ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎಂಬುದಕ್ಕೆ ಅಗತ್ಯವಾದ ವೈದ್ಯಕೀಯ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪೊಲೀಸರು ವಿಫಲರಾಗಿದ್ದರು. ಇದೇ ಕಾರಣದಿಂದ 2005ರಲ್ಲಿ ಮಂಡ್ಯದ ವಿಚಾರಣಾ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಮತ್ತು ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಪ್ರಕರಣ ರದ್ದು ಪಡಿಸಿದೆ. ತನಿಖಾಧಿಕಾರಿಗಳು ಆರೋಪಿಗಳ ಮೇಲೆ ಮಾಡಿರುವ ಆರೋಪವನ್ನು ಸೂಕ್ತ ರೀತಿಯಲ್ಲಿ ದಾಖಲಿಸಿಲ್ಲ. ಅಲ್ಲದೆ, ಸಾಕ್ಷ್ಯಾಧಾರಗಳು ಮತ್ತು ವೈದ್ಯಕೀಯ ದಾಖಲೆಗಳು ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ದೃಢಪಡಿಸಿಲ್ಲ. ಹೀಗಾಗಿ ಆರೋಪಿಯನ್ನು ತಪ್ಪಿತಸ್ಥ ಎನ್ನುವುದಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಅಲ್ಲದೆ, ವಿಚಾರಣಾ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬಂದಿದೆ. ತನಿಖಾಧಿಕಾರಿಗಳು ಆರೋಪಿ ವಿರುದ್ಧದ ಆರೋಪಗಳ ಕುರಿತು ಯಾವುದೇ ಅನುಮಾನಗಳು ಇಲ್ಲದಂತೆ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳನ್ನು ಒದಗಿಸಬೇಕು. ಸಾಕ್ಷ್ಯಾಧಾರಗಳಲ್ಲಿ ಯಾವುದೇ ಸಂದೇಶವಿದ್ದಲ್ಲಿ ಆರೋಪಿಯನ್ನು ಅಪರಾಧಿಯನ್ನಾಗಿಸಲು ಸಾಧ್ಯವಿಲ. ಈ ರೀತಿಯ ತನಿಖಾ ದೋಷಗಳು ಆರೋಪಿಗೆ ಲಾಭವಾಗಿ ಪರಿಣಮಿಸಲಿದೆ ಎಂದು ನ್ಯಾಯಪೀಠ ತಿಳಿಸಿದೆ.

ಆರೋಪ ಪಟ್ಟಿಯಲ್ಲಿ ಸಂತ್ರಸ್ತೆಯ ಸಹೋದರಿಯನ್ನು ಸಾಕ್ಷಿಯನ್ನಾಗಿ ತಿಳಿಸಲಾಗಿದೆ. ಆದರೆ, ವಿಚಾರಣೆ ವೇಳೆ ಅವರ ಹೇಳಿಕೆಗಳನ್ನು ಪಡೆದುಕೊಂಡಿಲ್ಲ. ಸಂಸ್ತ್ರಸ್ತೆ ಬಾಲಕಿ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದರೂ, ಅದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಒದಗಿಸಿಲ್ಲ. ಸಂತ್ರಸ್ತೆಯ ಬಟ್ಟೆಗಳು ಮತ್ತು ಆರೋಪಿಯ ಒಳ ಉಡುಪುಗಳ ಮೇಲೆ ಕಂಡು ಬರುವ ಕಲೆಗಳಿಗೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆಯನ್ನು ನಡೆಸಿಲ್ಲ. ಎಲ್ಲಾ ಸಾಕ್ಷ್ಯಗಳು ಆಪಾಧಿತ ಘಟನೆಯ ಬಗ್ಗೆ ನ್ಯಾಯಾಲಯಕ್ಕೆ ಅನುಮಾನ ಉಂಟು ಮಾಡುತ್ತದೆ. ಅಂತಹ ಪುರಾವೆಗಳನ್ನು ಆಧರಿಸಿ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ತಿಳಿಸಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.