ETV Bharat / state

ದಕ್ಷಿಣ ಕನ್ನಡ-ಉಡುಪಿಯಲ್ಲಿ 105 ಗ್ರಾಮಗಳು ನೆರೆ ಪೀಡಿತ: ಸಚಿವ ಆರ್.ಅಶೋಕ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ 105 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಎನ್‌ಡಿಆರ್‌ಎಫ್ ತಂಡವನ್ನು ಕಳುಹಿಸಲಾಗಿದ್ದು, ಸದ್ಯ 4124 ಜನರನ್ನು ಪ್ರವಾಹದ ಜಾಗದಿಂದ ಸ್ಥಳಾಂತರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.

flood-in-105-villages-of-mangaluru-and-udupi-r-ashok
ಸಚಿವ ಆರ್.ಅಶೋಕ್
author img

By

Published : Sep 21, 2020, 8:07 AM IST

Updated : Sep 21, 2020, 8:26 AM IST

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 105 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಈಗಾಗಲೇ ಮಂಗಳೂರಿನಿಂದ ಎನ್‌ಡಿಆರ್‌ಎಫ್ ತಂಡವನ್ನು ಕಳುಹಿಸಲಾಗಿದ್ದು, ಸದ್ಯ 4124 ಜನರನ್ನು ಪ್ರವಾಹದ ಜಾಗದಿಂದ ಸ್ಥಳಾಂತರಿಸಲಾಗಿದೆ. 36 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪರಿಹಾರ ಕೇಂದ್ರಗಳಲ್ಲಿ 1,250 ಜನರನ್ನು ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೈಸೂರಿನ ಎನ್‌ಡಿಆರ್‌ಎಫ್ ತಂಡ ಸೋಮವಾರ ಪ್ರವಾಹ ಪೀಡಿತ ಸ್ಥಳಗಳಿಗೆ ತಲುಪಲಿದೆ. ನಾನು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಕ್ಷಣ ಕ್ಷಣದ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ ಎಂದಿದ್ದಾರೆ.

Last Updated : Sep 21, 2020, 8:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.