ಬೆಂಗಳೂರು: ಕಳೆದ ಬಾರಿಗಿಂತಲೂ ಈ ಸಲ ನೆರೆ ಹಾನಿ ಹೆಚ್ಚಾಗಿದೆ. ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಭಾರೀ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮನೆ ಕಳೆದುಕೊಂಡವರಿಗೆ ತಕ್ಷಣ ಈಗಾಗಲೇ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ವಿತರಣೆ ಮಾಡಿದ್ದೇವೆ. ಹಾನಿಯ ಅಂದಾಜಿನ ಬಗ್ಗೆ ಇಂದು ಸಚಿವ ಸಂಪುಟದಲ್ಲೂ ಚರ್ಚಿಸುತ್ತೇವೆ ಎಂದು ವಿವರಿಸಿದರು.
ನೆರೆ ಹಾನಿ ಪರಿಹಾರ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಎನ್ಡಿಆರ್ಎಫ್ ನಿಯಮಾವಳಿ ತಿದ್ದುಪಡಿ ಬಗ್ಗೆಯೂ ಚರ್ಚಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.