ETV Bharat / state

ಪ್ರವಾಹ ಪರಿಸ್ಥಿತಿ: ಕೂಡಲೇ ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿ.ಎಸ್​. ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದ್ರು. ಸಂವಾದದಲ್ಲಿ ಅಧಿಕಾರಿಗಳಿಗೆ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ, ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು ಎಂದು ಅಭಯ ನೀಡಿದ್ದಾರೆ.

ಸಿಎಂ ಬಿ.ಎಸ್​. ಯಡಿಯೂರಪ್ಪ ವಿಡಿಯೋ ಸಂವಾದ
author img

By

Published : Oct 23, 2019, 5:32 PM IST

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆ ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಅವರು, ದುರಾದೃಷ್ಟವಶಾತ್ ಪ್ರವಾಹದಿಂದಾಗಿ 13 ಜನರು ಮೃತಪಟ್ಟಿದ್ದಾರೆ. ಸುಮಾರು 10,038 ಮನೆಗಳಿಗೆ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಹಾಗೂ ಹಾನಿಗೊಳಗಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರಸ್ತುತ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ. ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು. ಈಗಾಗಲೇ ಎನ್‍ಡಿಆರ್‍ಎಫ್‍ನ ಆರು ತಂಡಗಳು ಹಾಗೂ ರಾಯಚೂರಿನಲ್ಲಿ ಸೇನೆಯ ತಂಡವೂ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಸಂತ್ರಸ್ತರಿಗಾಗಿ 28 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯ, ಔಷಧಿ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಬೇಕು. ಹಿಂದೆ ಬಂದಿರುವ ದೂರುಗಳನ್ನು ಗಮನದಲ್ಲಿರಿಸಿಕೊಂಡು ಅವುಗಳನ್ನು ಸರಿಪಡಿಸಿ, ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಪ್ರತಿ ಪರಿಹಾರ ಕೇಂದ್ರಕ್ಕೆ ನಿಯೋಜಿಸಬೇಕು ಎಂದು ಬಿಎಸ್​​​ವೈ ಆದೇಶಿಸಿದರು.

ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 1027.54 ಕೋಟಿ ರೂ. ಲಭ್ಯವಿದ್ದು, ಪರಿಹಾರ ಕಾರ್ಯಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ದೀಪಾವಳಿ ರಜೆಯ ನೆಪ ಹೇಳಿ ಕರ್ತವ್ಯದಿಂದ ವಿಮುಖರಾಗದೆ, ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ನಿರ್ದೇಶನ ನೀಡಿದ್ರು.

Intro:ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.Body:ವಿಧಾನಸೌಧದಲ್ಲಿ ಇಂದು ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಯಡಿಯೂರಪ್ಪ, ದುರದೃಷ್ಟವಶಾತ್ ಪ್ರವಾಹದಿಂದಾಗಿ 13 ಜನರು ಮೃತ ಪಟ್ಟಿದ್ದು, ಸುಮಾರು 10038 ಮನೆಗಳಿಗೆ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಹಾಗೂ ಹಾನಿಗೊಳಗಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಪ್ರಸ್ತುತ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ. ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು. ಈಗಾಗಲೇ ಎನ್‍ಡಿಆರ್‍ಎಫ್‍ನ ಆರು ತಂಡಗಳು ಹಾಗೂ ರಾಯಚೂರಿನಲ್ಲಿ ಸೇನೆಯ ತಂಡವೂ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಸಂತ್ರಸ್ತರಿಗಾಗಿ 28 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು, ಔಷಧಿ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಬೇಕು. ಹಿಂದೆ ಬಂದಿರುವ ದೂರುಗಳನ್ನು ಗಮನದಲ್ಲಿರಿಸಿಕೊಂಡು ಅವುಗಳನ್ನು ಸರಿಪಡಿಸಿ, ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರತಿ ಪರಿಹಾರ ಕೇಂದ್ರಕ್ಕೆ ನಿಯೋಜಿಸಬೇಕು ಎಂದು ಬಿಎಸ್ ವೈ ಸೂಚಿಸಿದರು.
ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 1027.54 ಕೋಟಿ ರೂ. ಲಭ್ಯವಿದ್ದು, ಪರಿಹಾರ ಕಾರ್ಯಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ದೀಪಾವಳಿ ರಜೆಯ ನೆಪ ಹೇಳಿ ಕರ್ತವ್ಯದಿಂದ ವಿಮುಖರಾಗದೆ, ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ನಿರ್ದೇಶನ ನೀಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕಂದಾಯ ಇಲಾಖೆ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.