ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಇದೇ ವರ್ಷ ಎರಡನೇ ಹಂತದಲ್ಲಿ ಉಂಟಾಗಿರುವ ನೆರೆ ಸಮಸ್ಯೆಯ ಸಂತ್ರಸ್ತ ಪ್ರದೇಶಗಳಿಗೆ ಇಂದು ಭೇಟಿ ಕೊಟ್ಟಿರುವ ಅವರು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
![Dinesh Gundurao tweet](https://etvbharatimages.akamaized.net/etvbharat/prod-images/4852820_mng.jpg)
ರಾಜ್ಯ ಬಿಜೆಪಿ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಿ ಹೆಚ್ಚಿನ ಮೊತ್ತದ ಪರಿಹಾರ ತರುವಲ್ಲಿ ವಿಫಲವಾಗಿದೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ, ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕವೂ ತನ್ನ ಆಕ್ರೋಶ ಹೊರಹಾಕುತ್ತಾ ಬಂದಿದೆ. ಇದೀಗ ಪಕ್ಷದ ಅಧ್ಯಕ್ಷರು ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.